Ramesh jarkiholi | ಗುರುವಿಗೆ ತಿರುಮಂತ್ರ : ಬಿಜೆಪಿಗೆ 16 `ಕೈ’ ಶಾಸಕರು.. ಸಾಹುಕಾರ್ ಬಾಂಬ್
ಬೆಂಗಳೂರು : ಬಿಜೆಪಿಯ ಸಚಿವರು, ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಮತ್ತೊಂದೆಡೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡ ಇದೇ ಮಾತನ್ನ ಹೇಳಿದ್ದು, ಬಿಜೆಪಿ ಪಾಳಯದಲ್ಲಿ ಬಿರುಗಾಳಿಗೆ ಕಾರಣವಾಗಿದೆ.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರಿಗೆ ಟಕ್ಕರ್ ಕೊಡಲು ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ ಅಖಾಡಕ್ಕೆ ಇಳಿದಿದ್ದು, 16 ಮಂದಿ ಕಾಂಗ್ರೆಸ್ ಶಾಸಕರನ್ನು ಬಿಜೆಪಿಗೆ ಕರೆತರುತ್ತೇನೆ ಎಂದಿದ್ದಾರೆ.

ಕಾಂಗ್ರೆಸ್ ನಾಯಕ ಹೇಳಿಕೆಗಳಿಗೆ ಸದಾಶಿವನಗರದಲ್ಲಿ ಪ್ರತಿಕ್ರಿಯೆ ನೀಡಿರುವ ರಮೇಶ್ ಜಾರಕಿಹೊಳಿ, ಕಾಂಗ್ರೆಸ್ ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ. ನಾನು ಕಾಂಗ್ರೆಸ್ ಬಿಡುವಾಗ 36 ಜನ ನನ್ನ ಜೊತೆ ಇದ್ದರು. ಇದರಲ್ಲಿ 17 ಜನ ಬಂದೆವು. ಉಳಿದವರು ನಮ್ಮ ಜೊತೆ ಇದ್ದಾರೆ. ಈಗ 19 ಜನ ನಮ್ಮ ಸಂಪರ್ಕದಲ್ಲಿದ್ದಾರೆ. ಹೈಕಮಾಂಡ್ ಒಪ್ಪಿದರೆ ಉಳಿದ ಶಾಸಕರನ್ನು ಬಿಜೆಪಿ ಕರೆತರುತ್ತೇನೆ ಎಂದು ಬಾಂಬ್ ಸಿಡಿಸಿದ್ದಾರೆ.
ಅಲ್ಲದೇ ಸಿದ್ದರಾಮಯ್ಯ ಮತ್ತೆ ಸಿಎಂ ಆಗೋದು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ, ಮತ್ತೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಬರುತ್ತೆ ಎಂದು ಜಾರಕಿಹೊಳಿ ಭವಿಷ್ಯ ನುಡಿದಿದ್ದಾರೆ.