ಅಧಿಕಾರಿಗಳಿಗೆ ಹಿಗ್ಗಾಮುಗ್ಗಾ ತರಾಟೆ : ಸೂ.. ಮಕ್ಕಳು ಎಂದ ರಮೇಶ್ ಕುಮಾರ್
ಕೋಲಾರ : ಅಧಿಕಾರಿಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡು ಮಾತನಾಡುವ ಭರದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವಾಚ್ಯ ಶಬ್ದಗಳನ್ನು ಬಳಕೆ ಮಾಡಿದ್ದಾರೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಶ್ರೀನಿವಾಸಪುರ ಪಟ್ಟಣದಲ್ಲಿ ಡಿಸಿಸಿ ಬ್ಯಾಂಕ್ ಸಾಲ ವಿತರಣೆ ಸಲುವಾಗಿ ಚರ್ಚಿಸಲು ಸಹಕಾರ ಸಂಘಗಳ ಕಾರ್ಯದರ್ಶಿಗಳ ಸಭೆಯಲ್ಲಿ ನಡೆಯಿತು.
ಈ ಸಭೆಯಲ್ಲಿ ಭಾಗಿಯಾಗಿದ್ದ ರಮೇಶ್ ಕುಮಾರ್, ರೈತರಿಗೆ ಡಿಸಿಸಿ ಬ್ಯಾಂಕ್ ವಿತರಿಸುವ ಸಾಲಕ್ಕೆ ದಾಖಲೆ ಕೊಡಲು ಕಂದಾಯ ಇಲಾಖೆ ವಿಳಂಬ ಮಾಡುತ್ತಿದೆ.
ಸರ್ಕಾರಿ ನೌಕರರು ಮನುಷ್ಯತ್ವ ಕಳೆದುಕೊಂಡಿದ್ದಾರೆ, ಕೆಲಸ ಮಾಡದ ನೌಕಕರನ್ನು ಬಾರಿಸಲು ಶುರು ಮಾಡ್ತೀನಿ.
ನೌಕರರ ಸಂಘ ಬಂದು ಪ್ರತಿಭಟನೆ ಮಾಡಲಿ ನೋಡ್ತೀನಿ, ರೈತರನ್ನು ಕರೆದುಕೊಂಡು ಸೂ….ಮಕ್ಕಳನ್ನು ಸುಡಿಸಿಬಿಡುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದ್ದು, ಪರ, ವಿರೋಧ ಚರ್ಚೆ ನಡೆಯುತ್ತಿದೆ.