ಕೊರೊನಾಸುರನ ಕಾಟಕ್ಕೆ ದೇಶವನ್ನು ಲಾಕ್ ಡೌನ್ ಮಾಡಲಾಗಿದೆ. ಇದರಿಂದ ಅನೇಕ ಜನ ಸಿನಿಮಾ ಸ್ಟಾರ್ ಗಳು, ರಾಜಕೀಯ ನಾಯಕರು ತಮ್ಮ ಮನೆಯಲ್ಲಿ ಕಾಲ ಕಳೆಯುತ್ತಿದ್ದಾರೆ. ಆದರೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮಾತ್ರ ಕೃಷಿ ಕೆಲಸಕ್ಕೆ ಕೈ ಹಾಕಿದ್ದಾರೆ.
ರಮೇಶ್ ಕುಮಾರ್ ಕೋಲಾರದಲ್ಲಿರುವ ತಮ್ಮ ತೋಟದಲ್ಲಿ ಕೆಲಸ ಮಾಡುವ ಮೂಲಕ ಲಾಕ್ ಡೌನ್ ಸಮಯವನ್ನು ಕಳೆಯುತ್ತಿದ್ದಾರೆ. ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಗ್ರಾಮದಲ್ಲಿರುವ ತಮ್ಮ ಮಾವಿನ ತೋಟದಲ್ಲಿ ಸಸಿಗಳಿಗೆ ನೀರು ಹಾಯಿಸಲು ವ್ಯವಸ್ಥೆ ಮಾಡುತ್ತಿದ್ದಾರೆ. ಅದಕ್ಕಾಗಿ ಸ್ವತಹ ತಾವೇ ಹೆಗಲ ಮೇಲೆ ಪೈಪ್ ಗಳನ್ನು ಹೊತ್ತುಕೊಂಡು ಹೋಗಿದ್ದಾರೆ. ಲಾಕ್ ಡೌನ್ ಆದ ಕಾರಣ ದಿನಗೂಲಿ ಕಾರ್ಮಿಕರು ಸಿಗುತ್ತಿಲ್ಲ. ಹಾಗಾಗಿ ತೋಟಕ್ಕೆ ಹನಿ ನೀರಾವರಿಗೆ ಪೈಪ್ ಅಳವಡಿಸಲು ಮುಂದಾಗಿದ್ದಾರೆ. ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.