ಒತ್ತಡಕ್ಕೆ ಮಣಿದ ಸಾಹುಕಾರ್ : ಸಚಿವ ಸ್ಥಾನಕ್ಕೆ ರಾಜೀನಾಮೆ

1 min read
Ramesh Zarakiholi

ಒತ್ತಡಕ್ಕೆ ಮಣಿದ ಸಾಹುಕಾರ್ : ಸಚಿವ ಸ್ಥಾನಕ್ಕೆ ರಾಜೀನಾಮೆ

ಬೆಂಗಳೂರು : ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಅಂತಾ ಹೇಳಿದ್ದ ರಮೇಶ್ ಜಾರಕಿಹೊಳಿ ಕೊನೆಗೂ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ಸರ್ಕಾರಕ್ಕೆ ಮುಜುಗರ ಉಂಟಾಗುವ ಹಿನ್ನೆಲೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ರಮೇಶ್ ಜಾರಕಿಹೊಳಿಗೆ ರಾಜೀನಾಮೆ ನೀಡುವಂತೆ ಸೂಚಿಸಿದ್ದರು. ಈ ಹಿನ್ನೆಲೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದು, ಅದನ್ನ ಅಂಗೀಕರಿಸಲಾಗಿದೆ.

ramesh rajakiholi

ನಿನ್ನೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ರಮೇಶ್ ಜಾರಕಿಹೊಳಿಯ ರಾಸಲೀಲೆ ವಿಡಿಯೋ ಬಿಡುಗಡೆ ಮಾಡಿ ಪೊಲೀಸರಿಗೆ ದೂರು ನೀಡಿದ್ದರು.  ಈ ವಿಚಾರ ಮಾಧ್ಯಮಗಳಲ್ಲಿ ಪ್ರಸಾರವಾಗಿ ಭಾರಿ ಸದ್ದು ಮಾಡಿತ್ತು.

ಇದಾದ ಬಳಿಕ ಮಾಧ್ಯಮಗಳಿಗೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ರಮೇಶ್ ಜಾರಕಿಹೊಳಿ, ಅದೊಂದು ಫೇಕ್ ವಿಡಿಯೋ. ಅದರಲ್ಲಿ ಇರೋದು ನಾನಲ್ಲ, ಆ ಯುವತಿ ಯಾರೋ ಗೊತ್ತಿಲ್ಲ.

ಈ ಬಗ್ಗೆ ತನಿಖೆ ನಡೆಯಬೇಕು. ನಾನು ಯಾವುದೇ ತಪ್ಪು ಮಾಡಿಲ್ಲ, ಹೀಗಾಗಿ ರಾಜೀನಾಮೆ ನೀಡುವುದಿಲ್ಲ ಅಂತಾ ಹೇಳಿದ್ದರು.

Motera stadium
ಜಾಹೀರಾತು

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd