ರಮೇಶ್ ಜಾರಕಿಹೊಳಿ ರಾಜೀನಾಮೆ : ಗೋಕಾಕ್ ನಲ್ಲಿ ಸಾಹುಕಾರ್ ಬೆಂಬಲಿಗರ ಪ್ರತಿಭಟನೆ

1 min read
Ramesh jarakiholi

ರಮೇಶ್ ಜಾರಕಿಹೊಳಿ (Ramesh Zarakiholi)  ರಾಜೀನಾಮೆ : ಗೋಕಾಕ್ ನಲ್ಲಿ ಸಾಹುಕಾರ್ ಬೆಂಬಲಿಗರ ಪ್ರತಿಭಟನೆ

ಗೋಕಾಕ್ : ಕಾಮಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ರಮೇಶ್ ಜಾರಕಿಹೊಳಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಈಗಾಗಲೇ ಸಿಎಂಗೆ ರಮೇಶ್ ಜಾರಕಿಹೊಳಿ ರಾಜೀನಾಮೆ ಪತ್ರ ರವಾನೆ ಆಗಿದೆ.

Ramesh Zarakiholi

ಈ ಮಧ್ಯೆ ರಮೇಶ್ ಜಾರಕಿಹೊಳಿ ಮತ ಕ್ಷೇತ್ರ ಗೋಕಾಕ್ ನಲ್ಲಿ ಸಾಹುಕಾರ್ ಬೆಂಬಲಿಗರು ಯಾವುದೇ ಕಾರಣಕ್ಕೂ ರಾಜೀನಾಮೆ ಅಂಗೀಕರಿಸಬಾರದು ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ.

ರಮೇಶ್ ಜಾರಕಿಹೊಳಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ ಅನ್ನೋ ಸುದ್ದಿ ತಿಳಿಯುತ್ತಿದ್ದಂತೆ ಗೋಕಾಕ್ ನ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ರಮೇಶ್ ಜಾರಕಿಹೊಳಿ ಬೆಂಬಲಿಗರು, ಯಾವುದೇ ಕಾರಣಕ್ಕೂ ರಾಜೀನಾಮೆ ಅಂಗೀಕರಿಸಬಾರದು.

ಇಂದು ಅವರ ರಾಜೀನಾಮೆಯನ್ನ ಅಂಗೀಕರಿಸಿದ್ರೆ ಬೆಳಗಾವಿ ಬಂದ್ ಮಾಡುವುದಾಗಿ ಎಂದು ಘೋಷಣೆಗಳನ್ನ ಕೂಗಿದ್ದಾರೆ.

Motera stadium
ಜಾಹೀರಾತು

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd