ಶಾಸಕ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ : ಸತೀಶ್ ಜಾರಕಿಹೊಳಿ ಹೇಳಿದ್ದೇನು..?
ಚಿಕ್ಕೋಡಿ : ಬೆಳಗಾವಿ ಸಾಹುಕಾರ್ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಗಾಳಿ ಮಾತು ರಾಜ್ಯದಲ್ಲಿ ಹರಿಡಾಡುತ್ತಿದೆ.
ಈ ಬಗ್ಗೆ ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ರಮೇಶ್ ಜಾರಕಿಹೊಳಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎನ್ನುವ ವಿಚಾರ ನನಗೆ ಗೊತ್ತಿಲ್ಲ. ರಾಜೀನಾಮೆ ಕೊಡುವ ಈ ಬಗ್ಗೆ ಅವರನ್ನೇ ಕೇಳಬೇಕು ಎಂದಿದ್ದಾರೆ.
ಹುಕ್ಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಬಗ್ಗೆ ನನಗೆ ಗೊತ್ತಿಲ್ಲ. ಅವರ ರಾಜೀನಾಮೆ ವಿಚಾರದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದಿದ್ದಾರೆ.
ಇದೇ ವೇಳೆ ಲಾಕ್ ಡೌನ್ ಓಪನ್ ವಿಚಾರವಾಗಿ ಮಾತನಾಡಿದ ಅವರು, ಲಾಕ್ ಡೌನ್ ತಕ್ಷಣವೇ ಓಪನ್ ಮಾಡುವುದಕ್ಕೆ ಆಗುವುದಿಲ್ಲ.
ಸರ್ಕಾರ ಹಂತ ಹಂತವಾಗಿ ಓಪನ್ ಮಾಡಲಿ, ಸರಕಾರ ಹೇಗೆ ಲಾಕ್ ಡೌನ್ ಓಪನ್ ಮಾಡುತ್ತದೆ ಎಂಬುವುದನ್ನು ಕಾದು ನೋಡೋಣ.
ಹಂತ ಹಂತವಾಗಿ ಲಾಕ್ ಡೌನ್ ಓಪನ್ ಮಾಡುವಂತೆ ನಾವು ಕೂಡ ಸಲಹೆ ನೀಡಿದ್ದೇವೆ ಎಂದರು.









