ಬೆಂಗಳೂರು: ನಗರದಲ್ಲಿ ನಡೆದಿರುವ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಕಾ ದಳಕ್ಕೆ (NIA) ವರ್ಗಾವಣೆ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಎನ್ ಐಎಯು ಕೇಂದ್ರ ಗೃಹ ಇಲಾಖೆಗೆ ಮಾಹಿತಿ ನೀಡಿ ಎಫ್ ಐಆರ್ ದಾಖಲಿಸಿ ತನಿಖೆ ಆರಂಭಿಸಿದೆ. ದೇಶದ ಒಳಗಡೆ ಯಾವುದೇ ಉಗ್ರ ಚಟುವಟಿಕೆ, ಬಾಂಬ್ ಸ್ಫೋಟದ ತನಿಖೆಯನ್ನು ಎನ್ಐಎ ವಹಿಸಿಕೊಳ್ಳುತ್ತದೆ. ಈ ಹಿಂದೆ ಬೇರೆ ರಾಜ್ಯದಲ್ಲಿ ಹಲವು ಪ್ರಕರಣಗಳು ನಡೆದಿದ್ದು, ಹೊಸ ಪ್ರಕರಣಗಳಿಗೂ ಹಾಗೂ ಹಳೆಯ ಪ್ರಖರಣಗಳಿಗೂ ಸಾಮ್ಯತೆ ಇದೆಯಾ ಎಂಬ ಕುರಿತು ಎನ್ ಐಎ ತನಿಖೆ ಕೈಗೊಂಡಿದೆ.
ರಾಜ್ಯಗಳು ಉಗ್ರ ಕೃತ್ಯದಂತಹ ಪ್ರಕರಣಗಳು ದಾಖಲಾದಾಗ ಅದನ್ನು ಕೇಂದ್ರ ಸರ್ಕಾರದ ಅಡಿಯಲ್ಲಿರುವ ಎನ್ಐಎಗೆ ವರ್ಗಾಯಿಸುತ್ತದೆ.