ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿಗಳನ್ನು ಎನ್ ಐಎ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.
ಕೋಡ್ ವರ್ಡ್ ಸಹಾಯದ ಮೂಲಕ ಆರೋಪಿಗಳು ಅರೆಸ್ಟ್ ಆಗಿದ್ದಾರೆ. ಕೃತ್ಯ ಎಸಗಿದ್ದ ಮುಸಾವೀರ್ ಹುಸೇನ್ ಕೋಲ್ಕತ್ತಾದ ಪೂರ್ವ ಮಿಡ್ನಾಪುರ ದಿಘಾ ಮನೆಯಲ್ಲಿ ಅಡಗಿ ಕುಳಿತಿದ್ದ ಎನ್ನಲಾಗಿದೆ. ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಮುಸಾವೀರ್ ಹಾಗೂ ಕೃತ್ಯಕ್ಕೆ ಸಹಕಾರ ನೀಡಿದ್ದ ಅಬ್ದುಲ್ ಮತೀನ್ ನನ್ನು ಬಂಧಿಸಿದ್ದಾರೆ.
ಶಿವಮೊಗ್ಗ ತುಂಗಾ ನದಿ ತೀರದಲ್ಲಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧಿಯಾಗಿರುವ ಮಾಝ್ ಮುನೀರ್ ನನ್ನುಎನ್ ಐಎ ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು. ಈ ವೇಳೆ ಮೆಮೋರಿ ಕಾರ್ಡ್ ಪತ್ತೆಯಾಗಿತ್ತು. ಈ ಮೆಮೋರಿ ಕಾರ್ಡ್ ಪರಿಶೀಲಿಸಿದಾಗ ಹಲವು ಕೋಡ್ ವರ್ಡ್ ಲಭಿಸಿದ್ದವು. ಕೋಡ್ ವರ್ಡ್ ಡಿಕೋಡ್ ಮಾಡಿದಾಗ ಆರೋಪಿಗಳ ಕುರಿತು ಮಾಹಿತಿ ಸಿಕಿದ್ದವು ಎನ್ನಲಾಗಿದೆ.
ಆರೋಪಿಗಳು ಪಶ್ಚಿಮ ಬಂಗಾಳದಲ್ಲೇ ತಲೆ ಮರೆಸಿಕೊಂಡಿದ್ದ ವಿಚಾರ ತಿಳಿದು ಬಂದಿತ್ತು. ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದ ಎನ್ಐಎ ಇಂದು ಪಶ್ಚಿಮ ಬಂಗಾಳದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಆರೋಪಿ ಮುನೀರ್ ಜೈಲಿನಲ್ಲಿಯೇ ಕುಳಿತು ಕೋಡ್ ವರ್ಡ್ ಬರೆದಿದ್ದ ಎನ್ನಲಾಗಿದೆ.
ಮಾಝ್ ಮುನೀರ್ನನ್ನು ಎನ್ಐಎ ಅಧಿಕಾರಿಗಳು 7 ದಿನಗಳ ಕಾಲ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಜೈಲಿನಲ್ಲಿ ರೇಡ್ ಮಾಡಿದ ಬಳಿಕ ಮಾಝ್ ಬ್ಯಾರಕ್ನಲ್ಲಿ ಕೆಲವೊಂದು ಪತ್ರಗಳು ಸಿಕ್ಕಿದ್ದವು. ಕೆಫೆ ಸ್ಫೋಟ ಪ್ರಕರಣದಲ್ಲಿ ಮಾಝ್ ಮುನೀರ್ ಸೂತ್ರಧಾರ. ಆತನೇ ಮೊದಲ ಆರೋಪಿ ಎನ್ನಲಾಗಿದೆ.
ಎರಡು ಮತ್ತು ಮೂರನೇ ಆರೋಪಿಗಳನ್ನಾಗಿ ಮತೀನ್ ಮತ್ತು ಮುಸಾವೀರ್ ಹೆಸರನ್ನು ಉಲ್ಲೇಖಿಸಲಾಗಿದೆ. ಈಗ ಬಂಧಿಯಾಗಿರುವ ಮುಜಾಮಿಲ್ ಷರೀಫ್ ನಾಲ್ಕನೇ ಆರೋಪಿಯಾಗಿದ್ದಾನೆ ಎನ್ನಲಾಗಿದೆ. ಮಾಝ್ ಮುನೀರ್ ಮಂಗಳೂರಿನ ಮುಡಿಪು ಸಮಿಪದ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಟೆಕ್ ಓದುತ್ತಿದ್ದ ಸಂದರ್ಭದಲ್ಲಿ ಅರೆಸ್ಟ್ ಆಗಿದ್ದ.