ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ (The Rameshwaram Cafe Bomb Blast Case) ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ಇಂದು ಮತ್ತೆ ಸ್ಥಳ ಮಹಜರು ನಡೆಸಿದೆ.
ಆರೋಪಿಗಳನ್ನು ಸ್ಪಾಟ್ ಗೆ ಕರೆ ತಂದು ಮಹಜರು ನಡೆಸುತ್ತಿದೆ. ಸೋಮವಾರ ಬೆಳಿಗ್ಗೆ 5:30ಕ್ಕೆ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಗೆ ಆರೋಪಿಗಳಾದ ಮಸ್ಸಾವೀರ್, ಅಬ್ಧುಲ್ ಮತೀನ್ ತಹಾ ಅವರನ್ನು ಕರೆದುಕೊಂಡ ಬಂದ ಎನ್ ಐಎ ಸ್ಥಳ ಮಹಜರು ಪ್ರಕ್ರಿಯೆ ನಡೆಸುತ್ತಿದೆ.
ಎಲೆಕ್ಟ್ರಾನಿಕ್ ಸಿಟಿಯಲ್ಲಿನ ರಾರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1 ರಂದು ಬಾಂಬ್ ಸ್ಫೋಟ ನಡೆದಿತ್ತು. ಇದು ಭಾರೀ ಆತಂಕಕ್ಕೆ ಕಾರಣವಾಗಿತ್ತು. ಹೀಗಾಗಿ ಈ ಪ್ರಕರಣದ ತನಿಖೆಯನ್ನು ಎನ್ ಐಎಗೆ ವಹಿಸಲಾಗಿತ್ತು. ತನಿಖೆ ಕೈಗೊಂಡ ಎನ್ ಐಎ ಹಲವು ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಿದ ನಂತರ ಎನ್ ಐಎ ಕೋಲ್ಕತ್ತಾದಲ್ಲಿ ಏಪ್ರಿಲ್ 12 ರಂದು ಮಸ್ಸಾವೀರ್, ಅಬ್ಧುಲ್ ಮತೀನ್ ತಹಾ ಎಂಬ ಆರೋಪಿಗಳನ್ನು ಬಂಧಿಸಿತ್ತು. ಸ್ಥಳೀಯ ಪೊಲೀಸರ ಭದ್ರತೆಯ ನಡುವೆ ಈಗ ಎನ್ಐಎ ಮಹಜರು ಪ್ರಕ್ರಿಯೆ ನಡೆಸುತ್ತಿದೆ.