ವಿಜಯನಗರ ಪ್ರತ್ಯೇಕ ಜಿಲ್ಲೆ ಕಂಪಲ್ಸರಿ ಆಗಲೇಬೇಕು : ರಾಮುಲು
ಮೈಸೂರು : ವಿಜಯನಗರ ಪ್ರತ್ಯೇಕ ಜಿಲ್ಲೆ ಕಂಪಲ್ಸರಿ ಆಗಬೇಕು ಎಂದು ಸಚಿವ ಬಿ.ಶ್ರೀರಾಮುಲು ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯ ಸರ್ಕಾರ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಪ್ರತ್ಯೇಕ ಜಿಲ್ಲೆ ರಚನೆಗೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ಇದಕ್ಕೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.
ಇಂದು ಪ್ರತ್ಯೇಕ ವಿಜಯನಗರ ಜಿಲ್ಲೆ ರಚನೆ ವಿರೋಧಿಸಿ ಬಳ್ಳಾರಿ ಜಿಲ್ಲೆಯಾದ್ಯಂತ ಜನರು ರಸ್ತೆಗಳಿದಿದ್ದರು. ಬಳ್ಳಾರಿ ಜಿಲ್ಲೆ ವಿಭಜನೆ ವಿರೋಧಿಸಿ ಬಳ್ಳಾರಿ ಬಂದ್ ಗೆ ಕರೆಕೊಡಲಾಗಿತ್ತು. ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯಲ್ಲಿ ರಾಜಕೀಯ ಸ್ವಾರ್ಥವಿಲ್ಲ : ರಾಮುಲು
ಬಳ್ಳಾರಿಯ ಗಡಿಗಿ ಚನ್ನಪ್ಪ ವೃತ್ತದ ಬಳಿ ಜಮಾಯಿಸಿ ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿಯ ಹತ್ತಾರು ಮುಖಂಡರು ಬೆಳ್ಳಂಬೆಳಿಗ್ಗೆ ಟೈಯರ್ ಗೆ ಬೆಂಕಿ ಹಚ್ಚಿದರು.
ಜೊತೆಗೆ ಸಿಎಂ ಬಿಎಸ್ ವೈ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರ ಭಾವಚಿತ್ರ ದಹನ ಮಾಡಿ ತಮ್ಮ ಆಕ್ರೋಶವನ್ನ ವ್ಯಕ್ತಪಡಿಸಿದ್ದಾರೆ. `ಐದಾರು ಬಾರಿ ಗೆದ್ದಿರುವವರಿಗೆ ಮಂತ್ರಿಗಿರಿ’ : ವಲಸಿಗರಿಗೆ `ರಾಮುಲು ಬಾಣ’
ಇನ್ನೊಂದೆಡೆ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಕೂಡ ಬಳ್ಳಾರಿ ಜಿಲ್ಲೆ ವಿಭಜನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ಬಳ್ಳಾರಿ ಜಿಲ್ಲೆ ವಿಭಜನೆ ಆದ್ರೆ ಬಿಜೆಪಿ ಎರಡು ಭಾಗ ಆಗುತ್ತೆ ಎಂದು ಕೂಡ ಎಚ್ಚರಿಕೆ ನೀಡಿದ್ದಾರೆ.
ಈ ಮಧ್ಯೆ ವಿಜಯನಗರ ಪ್ರತ್ಯೇಕ ಜಿಲ್ಲೆ ವಿವಾದದ ಬಗ್ಗೆ ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದು, ವಿಜಯನಗರ ಪ್ರತ್ಯೇಕ ಜಿಲ್ಲೆ ಕಂಪಲ್ಸರಿ ಆಗಬೇಕು ಎಂದು ಒತ್ತಾಯಿಸಿದ್ದಾರೆ.
ಬಳ್ಳಾರಿ 250 ಕಿ.ಮಿ. ವ್ಯಾಪ್ತಿಯ ಅತಿ ದೊಡ್ಡ ಜಿಲ್ಲೆ. ಬಹಳ ದಿನಗಳಿಂದ ಪ್ರತ್ಯೇಕ ಜಿಲ್ಲೆ ಆಗಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು.
ಇದು ನಾನು ಸಿಎಂ ವಿವೇಚನೆಗೆ ಬಿಟ್ಟ ವಿಚಾರ ಅಂತ ಹೇಳಿದ್ದೆ. ಈಗಾಗಲೇ ಸೋಮಶೇಖರ್ ರೆಡ್ಡಿಯನ್ನ ಸಿಎಂ ಮನವೊಲಿಸಲು ಮುಂದಾಗಿದ್ದಾರೆ. ನಾನು ಸೋಮಶೇಖರ್ ರೆಡ್ಡಿ ಮನವೊಲಿಸುತ್ತೇನೆ ಎಂದು ಹೇಳಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









