ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಈಗಾಗಲೇ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಎಂದು ನಟಿ ಹಾಗೂ ಮಾಜಿ ಸಂಸದೆ ರಮ್ಯಾ (Ramya) ಹೇಳಿದ್ದಾರೆ.
ಕೆಂಪಿಸಿದ್ದಯ್ಯನಹುಂಡಿಯಲ್ಲಿ ಸಿದ್ದರಾಮಯ್ಯ ಅವರೊಂದಿಗೆ ಪ್ರಚಾರ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಈಗಾಗಲೇ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಅವರನ್ನು ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಲು ಬಂದಿದ್ದೇನೆ. ಸಿದ್ದರಾಮಯ್ಯ ಪರ ಪ್ರಚಾರಕ್ಕೆ ಬಂದಿರೋದು ಸಂತಸವಾಗುತ್ತಿದೆ. ಎಂದು ಹೇಳಿದ್ದಾರೆ.
ಜನರನ್ನು ನೋಡಿದರೆ ನನಗೆ ಖುಷಿಯಾಗುತ್ತಿದೆ. ಪಕ್ಷ ಇನ್ನೂ ಅನೇಕ ಕಡೆ ಪ್ರಚಾರ ಮಾಡಬೇಕಾದ ಜವಬ್ದಾರಿಯನ್ನು ನನಗೆ ನೀಡಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಶಿವಮೊಗ್ಗ, ಬಿಜಾಪುರ ಸೇರಿದಂತೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಪ್ರಚಾರ ಮಾಡುತ್ತೇನೆ ಎಂದು ಹೇಳಿದ್ದಾರೆ.








