ನವದೆಹಲಿ: ಸುಪ್ರೀಂ ಕೋರ್ಟ್ ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೊಯ್ ಅವರು ಗುರುವಾರ ನೂತನ ರಾಜ್ಯಸಭಾ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು, ಗೋಗೊಯ್ ಅವರನ್ನು ರಾಜ್ಯಸಭೆಗೆ ನಾಮಕರಣ ಮಾಡಿದ್ದರು.
ಇನ್ನು ರಂಜನ್ ಗೋಗೊಯ್, ರಾಜ್ಯಸಭಾ ನಾಮ ನಿರ್ದೇಶಿತ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದನ್ನು, ವಿಪಕ್ಷ ನಾಯಕರು ವಿರೋಧಿಸಿದ್ದಾರೆ. ರಂಜನ್ ಗೋಗೊಯ್ ಅವರಿಗೆ ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು ಪ್ರಮಾಣವಚನ ಬೋಧಿಸಿದರು. ಆದರೆ ಪ್ರಮಾಣ ವಚನ ಸ್ವೀಕರಿಸುವ ವೇಳೆ ಕಾಂಗ್ರೆಸ್ ನಾಯಕರು ಹರಿಹಾಯ್ದರು. ಅಲ್ಲದೆ ‘ಶೇಮ್ ಶೇಮ್’ ಎಂದು ಕೂಗಿ ವಿರೋಧ ವ್ಯಕ್ತಪಡಿಸಿದರು.