ಬೆಂಗಳೂರು: ನಿವೃತ್ತ ಐಎಎಸ್ ಅಧಿಕಾರಿ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿರುವ ಘಟನೆ ನಗರದಲ್ಲಿ ನಡೆದಿದೆ.
28 ವರ್ಷದ ಮೆರಿನಾ ವಿಲ್ಸನ್ ಎಂಬ ಮಹಿಳೆ ನಿವೃತ್ತ ಐಎಎಸ್ ಅಧಿಕಾರಿ ರಾಮಚಂದ್ರ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದಾರೆ. ಮತ್ತು ಬರಿಸುವ ಪದಾರ್ಥ ಹಾಕಿ ಅತ್ಯಾಚಾರ ನಡೆಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಈ ಕುರಿತು ತಿಲಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಚಂದ್ರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ. ನನಗೆ ಮತ್ತು ಬರುವ ಪಾನೀಯವನ್ನು ನೀಡಿ ಅತ್ಯಾಚಾರ ಮಾಡಿದ್ದು, ನಾನು 8 ತಿಂಗಳ ಗರ್ಭಿಣಿಯಾಗಿದ್ದೇನೆ ಎಂದು ಆರೋಪಿಸಿದ್ದಾರೆ. ಸದ್ಯ ಐಎಎಸ್ ನಿವೃತ್ತ ಅಧಿಕಾರ ವಿರುದ್ಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.