ದಾವಣಗೆರೆ: ಅತ್ಯಾಚಾರ ಪ್ರಕರಣದಲ್ಲಿ ತಲೆ ಜಯನಗರ ಚರ್ಚ್‌ನ ಪಾದ್ರಿ ಅರೆಸ್ಟ್ ಆಗಿದ್ದಾನೆ.
ಪಾದ್ರಿ ರಾಜಶೇಖರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಕಳೆದ ಒಂದು ವಾರದಿಂದ ತಲೆ ಮರೆಸಿಕೊಂಡಿದ್ದ. ಮೊಬೈಲ್ ಲೊಕೇಷನ್ ಆಧರಿಸಿ ಹೈದರಾಬಾದ್‌ನಲ್ಲಿ ಕೆಟಿಜೆ ನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚರ್ಚ್‌ಗೆ ಬರುತ್ತಿದ್ದ ಮಹಿಳೆಯೊಬ್ಬರು ಪಾದ್ರಿ ವಿರುದ್ಧ ದೂರು ನೀಡಿದ ಹಿನ್ನೆಲೆಯಲ್ಲಿ ಆತನ ವಿರುದ್ಧ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಹೀಗಾಗಿ ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದಾರೆ. ಆತನ ಮಗಳೇ ಲೈಂಗಿಕ ದೌರ್ಜನ್ಯದ ಕುರಿತು ಆರೋಪಿಸಿದ್ದಳು. ಅಲ್ಲದೇ, ಚರ್ಚ್ ಗೆ ಬರುವ ಆರೇಳು ಜನ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಕುರಿತು ಆರೋಪಿಸಿದ್ದಳು.