ಮಾಡೆಲ್ ಮೇಲೆ ಅತ್ಯಾಚಾರ ಆರೋಪದಲ್ಲಿ, ಬಾಲಿವುಡ್ ಖ್ಯಾತ ನಟ ಸೇರಿ 9 ಜನರ ವಿರುದ್ಧ FIR
ಮುಂಬೈ : ಮಾಡೆಲ್ ಮೇಲೆ ಅತ್ಯಾಚಾರ ಮತ್ತು ಕಿರುಕುಳ ಆರೋಪದಡಿ ಬಾಲಿವುಡ್ ಖ್ಯಾತ ನಟ ಸೇರಿದಂತೆ 9 ಜನರ ವಿರುದ್ಧ ಮುಂಬೈನ ಬಾಂದ್ರಾ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಮಾಡೆಲ್ ಜಾಕಿ ಭಗ್ನಾನಿ ಸೇರಿದಂತೆ ಒಟ್ಟು 9 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಜಾಕಿ ಭಗ್ನಾನಿ, ಟ್ಯಾಲೆಂಟ್ ಮ್ಯಾನೆಟ್ ಮೆಂಟ್ ಕ್ವಾನ್ ನ ಸ್ಥಾಪಕ ಅನಿರ್ಬನ್ ಬ್ಲಾಹ್, ಛಾಯಾಗ್ರಾಹಕ ಜೂಲಿಯನ್, ಸೇರಿದಂತೆ 9 ಜನರ ವಿರುದ್ಧ ಕೇಸ್ ದಾಖಲಾಗಿದೆ.
ನಟನೆಗೆ ಅವಕಾಶ ನೀಡುವುದಾಗಿ ಹೇಳಿ 2014ರಿಂದ 2019ರ ವರೆಗೂ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಖ್ಯಾತ ಮಾಡೆಲ್ ದೂರು ನೀಡಿದ್ದಾರೆ. ದೂರಿನ ಬಳಿಕ ಪ್ರಾಥಮಿಕ ಮಾಹಿತಿ ಕಲೆ ಹಾಕಿರುವ ಪೊಲೀಸರು ಯುವತಿ ಮೇಲೆ ಪದೇ ಪದೇ ಅತ್ಯಾಚಾರ ವೆಸಗಿದ ಆರೋಪದ ಮೇಲೆ ಸೆಕ್ಷನ್ 376 ಮತ್ತು 354ರ ಅಡಿಯಲ್ಲಿ ಕಿರುಕುಳ ಪ್ರಕರಣ ದಾಖಲಿಸಿದ್ದಾರೆ. ಇನ್ನೂ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.