ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ – ಆರೋಪಿಗಳಿಗೆ 20 ವರ್ಷ ಜೈಲು ಶಿಕ್ಷೆ..!
ಮೈಸೂರು: ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರವೆಸಗಿದ್ದ ಕಾಮುಕರಿಗೆ ನ್ಯಾಯಾಲಯವು 20 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಜೊತೆಗೆ 25 ಸಾವಿರ ರೂಪಾಯಿಗಳ ದಂಡ ವಿಧಿಸಿ ತೀರ್ಪು ನೀಡಿದೆ. ಮೈಸೂರಿನಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಮೇಲೆ ಜೈಶಿವ ಮಹಾದೇವ (55) ಹಾಗೂ ಕೈಸರ್ ಪಾಷಾ (30) ಎಂಬ ಕಾಮುಕರಿಬ್ಬರು ಅತ್ಯಾಚಾರವೆಸಗಿದ್ದರು.
ಬಳಿಕ ಪೊಲೀಸರು ಇಬ್ಬರನ್ನೂ ಅರೆಸ್ಟ್ ಮಾಡಿ ನ್ಯಾಯಾಂಗಬಂಧನಕ್ಕೆ ಒಪ್ಪಿಸಿದ್ದರು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಬಿ.ಎಸ್.ಜಯಶ್ರೀ ಅವರು ಇಬ್ಬರಿಗೂ 20 ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ. ಇನ್ನೂ ಸಂತ್ರಸ್ತ ಬಾಲಕಿಯರಿಗೆ ತಲಾ 4 ಲಕ್ಷ ರೂ. ಪರಿಹಾರ ನೀಡಲು ಆದೇಶಿಸಿದ್ದಾರೆ.
ಬಾಲ್ಕನಿ ಮೇಲೆ ನಿಂತು ಬೆತ್ತಲೇ ಫೋಸ್ ಕೊಟ್ಟ ಮಹಿಳೆಯರು ಅಂದರ್!