9 ವರ್ಷದ ಮಗಳ ಮೇಲೆಯೇ ಅತ್ಯಾಚಾರವೆಸಗಿದ ತಂದೆ
ಉತ್ತರಪ್ರದೇಶ : ತಂದೆಯೊಬ್ಬ ಕುಡಿದ ಮತ್ತಿನಲ್ಲಿ ತನ್ನ ಸ್ವಂತ ಮಗಳ ಮೇಲೆಯೇ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಅಪರಾಧಗಳ ಆಗರವಾಗುತ್ತಿರುವ ಉತ್ತರಪ್ರದೇಶದಲ್ಲಿ ಬೆಳಕಿಗೆ ಬಂದಿದೆ.. ತಂದೆಯೇ ತನ್ನ 9 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ..
ಫತೇಪುರ್ ಜಿಲ್ಲೆಯ ಖಾಗಾ ಕೋತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು , ಬಾಲಕಿ ಅಳುತ್ತಿರುವ ಶಬ್ದ ಕೇಳಿ ಸ್ಥಳಕ್ಕೆ ಬಂದ ಆರೋಪಿಯ ಸಹೋದರ ಈ ವಿಚಾರ ಗೊತ್ತಾಗಿ ಇತರರ ನೆರವಿನಿಂದ ಬಾಲಕಿಯನ್ನ ರಕ್ಷಣ ಮಾಡಿದ್ದಾರೆ..
ಆರೋಪಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿಯನ್ನು ಬಂಧಿಸಿ , ಬಾಲಕಿಯನ್ನ ವೈದ್ಯಕೀಯ ಪರೀಕ್ಷೆಗೆ ಕಳಹಿಸಲಾಗಿದೆ.. ಬಾಲಕಿಯ ತಾಯಿ ಕೆಲ ವರ್ಷಗಳ ಹಿಂದೆ ಮೃತಪಟ್ಟಿದ್ದಾರೆ ಎಂದು ಕಾಂಗಾದ ಡೆಪ್ಯೂಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಗಯಾದತ್ ಮಿಶ್ರಾ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ..








