ಪ್ರೈಮರಿ ಶಾಲಾ ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದ ಅತ್ಯಾಚಾರ
ರಾಜಸ್ಥಾನ : ಪ್ರೈಮರಿ ಶಾಲಾ ವಿದ್ಯಾರ್ಥಿನಿ ಮೇಲೆ ಶಿಕ್ಷಕನೇ ಅತ್ಯಾಚಾರವೆಸಗಿರುವ ಹೇಯ ಕೃತ್ಯ ರಾಜಸ್ಥಾನದಲ್ಲಿ ಬೆಳಕಿಗೆ ಬಂದಿದೆ.. ಕರೌಲಿ ಜಿಲ್ಲೆಯಲ್ಲಿ ಇಂತಹದೊಂದು ಘಟನೆ ನಡೆದಿದೆ.
6ನೇ ತರಗತಿ ಬಾಲಕಿ ಮಂಗಳವಾರ ಬೆಳಗ್ಗೆ ಶಾಲೆಗೆ ಹೋದವಳು ಸಂಜೆಯಾದರೂ ಮನೆಗೆ ಹಿಂದಿರುಗದ ಕಾರಣ ಬಾಲಕಿಯ ತಾಯಿ ಶಾಲೆಯ ಬಳಿ ತೆರಳಿ ಆಕೆಗಾಗಿ ಹುಡುಕಾಟ ನಡೆಸಿದ್ದಾರೆ.
ಈ ವೇಳೆ ಬೀಗ ಹಾಕಿದ್ದ ಕೊಠಡಿಯಲ್ಲಿ ಬಾಲಕಿ ಅಳುತ್ತಿರುವ ಶಬ್ಧ ಕೇಳಿ ಬಾಗಿಲನ್ನು ಒಡೆದು ನೋಡಿದಾಗ ಮಗಳೊಂದಿಗೆ ಶಿಕ್ಷಕ ಇರುವುದನ್ನು ನೋಡಿದ್ದಾರೆ. ಈ ವೇಳೆ ಗಾಬರಿಗೊಂಡ ಶಿಕ್ಷಕ ಸ್ಥಳದಿಂದ ಓಡಿಹೋಗಿದ್ದಾನೆ.
ನಂತರ ಬಾಲಕಿ ನಡೆದ ಘಟನೆಯನ್ನು ತಾಯಿ ಬಳಿ ಹೇಳಿಕೊಂಡಿದ್ದು ಪೋಷಕರು ಈ ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಆರೋಪಿಯನ್ನು ಪ್ರಕರಣ ನಡೆದ 2 ದಿನಗಳ ನಂತರ ಪೊಲೀಸರು ಬಂದಿಸಿದ್ದು, ಆತನ ವಿರುದ್ಧ ಐಪಿಸಿ ಸೆಕ್ಷನ್ 376 ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ..







