ಉತ್ತರಪ್ರದೇಶ : ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ – ಮೂವರ ವಿರುದ್ಧ ಕೇಸ್
ಉತ್ತರಪ್ರದೇಶ : ಗ್ರಾಮವೊಂದರಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ ಹಾಗೂ ಆಕೆಯ ಕುಟುಂಬಸ್ಥರನ್ನು ಥಳಿಸಿದ ಆರೋಪದ ಮೇಲೆ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಪೊಲೀಸರ ಪ್ರಕಾರ, ಖಟೋಲಿ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯಲ್ಲಿ ಶುಕ್ರವಾರ ಈ ಘಟನೆ ನಡೆದಿದೆ. 20 ವರ್ಷದ ಮಹಿಳೆ ಜಾನುವಾರು ಮೇವು ಕೊಡಲು ಹೋಗಿದ್ದ ವೇಳೆ ಮೂವರು ವ್ಯಕ್ತಿಗಳು ಆಕೆಯನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತೆಯ ಕುಟುಂಬದವರು ನೀಡಿದ ದೂರಿನ ಪ್ರಕಾರ, ಮೂವರು ಪುರುಷರು ಮಹಿಳೆಯನ್ನು ಹತ್ತಿರದ ಹೊಲಕ್ಕೆ ಕರೆದೊಯ್ದು ಅಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಕುಟುಂಬಸ್ಥರು ಆರೋಪಿಗಳನ್ನ ತಡೆದಿದ್ದಾರೆ. ಈ ವೇಳೆ ಅವರನ್ನೂ ಥಳಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಮೂವರು ಆರೋಪಿಗಳು ಪರಾರಿಯಾಗಿದ್ದು, ಅವರ ಪತ್ತೆಗೆ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.