ಮೊಬೈಲ್ ಗಿಫ್ಟ್ ಕೊಟ್ಟು ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ
ಮಂಗಳೂರು : ಕಾಮುಕನೋರ್ವ ಅಪ್ರಾಪ್ತ ಬಾಲಕಿಗೆ ಮೊಬೈಲ್ ಕೊಡಿಸಿ ಬಳಿಕ ಆಕೆಯ ಜೊತೆ ಸಲುಗೆ ಬೆಳೆಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ನಿರಂತರವಾಗಿ ಅತ್ಯಾಚಾರವೆಸಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ..
ಆರೋಪಿಯನ್ನ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಅಬ್ದುಲ್ ರಫೂರ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಈತ ಒಂದುವರೆ ವರ್ಷದ ಹಿಂದೆ ಸ್ನೇಹಿತರ ಮೂಲಕ ಅಪ್ರಾಪ್ತೆಯನ್ನು ಪರಿಚಯ ಮಾಡಿಕೊಂಡಿದ್ದ. ಬಳಿಕ ಆಕೆಗೆ ಮೊಬೈಲ್ ಗಿಫ್ಟ್ ನೀಡಿ ಆಕೆಯ ಜೊತೆಗೆ ಸಲುಗೆ ಬೆಳೆಸಿಕೊಂಡಿದ್ದಾನೆ..
ಬಳಿಕ ತಡರಾತ್ರಿ ಬಾಲಕಿಯ ಮನೆಗೆ ಬರಲು ಆರಂಭಿಸಿದ್ದಾನೆ. ಪ್ರತಿದಿನ ರಾತ್ರಿ 1 ಗಂಟೆಗೆ ಆಕೆಯ ಮನೆಯ ಕಾಂಪೌಂಡ್ ಗೋಡೆಯನ್ನು ಹಾರಿ ಬಂದು ಬಾಲ್ಕನಿಯ ಮೂಲಕ ಬಾಲಕಿಯ ರೂಮ್ ಪ್ರವೇಶಿಸಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗುತ್ತಿದ್ದ ಎಂದು ಆರೋಪಿಸಲಾಗಿದೆ.
ಬಾಲಕಿಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದು, ತಪಾಸಣೆಗೆ ವೈದ್ಯರ ಬಳಿ ಕರೆದುಕೊಂಡು ಹೋದಾಗ ಆಕೆ ಗರ್ಭಿಣಿಯಾಗಿರುವುದು ಗೊತ್ತಾಗಿದೆ. ನಂತರ ಆಕೆಯ ಪೋಷಕರು ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.