ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವ ಪ್ರಕರಣ ಸಾಬೀತಾದ ಹಿನ್ನೆಲೆಯಲ್ಲಿ ಯುವ ಕ್ರಿಕೆಟಿಗನಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ.
ನೇಪಾಳ ತಂಡದ ಮಾಜಿ ನಾಯಕ ಹಾಗೂ ಅದ್ಭುತ ಲೆಗ್ ಸ್ಪಿನ್ನರ್ ಸಂದೀಪ್ ಲಮಿಚಾನೆ (Sandeep Lamichhane) ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ. 29ರಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆದಿದ್ದು, ಕಠ್ಮಂಡು ಜಿಲ್ಲಾ ನ್ಯಾಯಾಲಯ ಸಂದೀಪ್ ಲಮಿಚಾನೆ ದೋಷಿ ಎಂದು ತೀರ್ಪು ನೀಡಿದೆ. ಆದರೆ, ಶಿಕ್ಷೆಯ ಪ್ರಮಾಣವನ್ನು ನ್ಯಾಯಾಧೀಶರು ಬಹಿರಂಗಪಡಿಸಿಲ್ಲ.
ಸಂದೀಪ್ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪ್ರತಿನಿಧಿಸಿದ್ದರು. ಲಾಮಿಚಾನೆ ಜನವರಿ 12 ರಿಂದ ಜಾಮೀನಿನ ಮೇಲೆ ಹೊರಗಿದ್ದಾರೆ.