ಚೆನ್ನೈ: ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ (Rape) ಎಸಗಿದ ಆರೋಪದ ಆರೋಪದ ಹಿನ್ನೆಲೆಯಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಈ ಘಟನೆ ತಮಿಳುನಾಡಿನ (Tamil Nadu) ತಿರುಪ್ಪೂರ್ (Tiruppur) ಜಿಲ್ಲೆಯಲ್ಲಿ ನಡೆದಿದೆ. ಅತ್ಯಾಚಾರಕ್ಕೆ ಒಳಗಾದ ಬಾಲಕಿಯರು 13 ಮತ್ತು 17 ವರ್ಷದವರಾಗಿದ್ದಾರೆ. 17 ವರ್ಷದ ಬಾಲಕಿ ಗರ್ಭಿಣಿಯಾದ ನಂತರ ಈ ವಿಷಯ ಬೆಳಕಿಗೆ ಬಂದಿದೆ.
ಅತ್ಯಾಚಾರಕ್ಕೆ ಒಳಗಾದ ವಿದ್ಯಾರ್ಥಿನಿ ಚಿಕ್ಕವಯಸ್ಸಿನಲ್ಲಿಯೇ ತನ್ನ ತಂದೆ- ತಾಯಿ ಕಳೆದುಕೊಂಡು ಚಿಕ್ಕಮ್ಮನ ಮನೆಯಲ್ಲಿ ವಾಸಿಸುತ್ತಿದ್ದಳು. ಶಾಲೆ ತೊರೆದು ಕೆಲಸಕ್ಕಾಗಿ ಹುಡುಕಾಡುತ್ತಿದ್ದಾಗ 15 ವರ್ಷದ ಬಾಲಕ ಆಕೆಯೊಂದಿಗೆ ಸ್ನೇಹ ಬೆಳೆಸಿದ್ದ. ನಂತರ ಕೆಲಸ ಕೊಡಿಸುವ ಆಮಿಷವೊಡ್ಡಿ ಸ್ನೇಹಿತರೊಂದಿಗೆ ಸೇರಿಕೊಂಡು ಅತ್ಯಾಚಾರ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.
ನಂತರ ಹಲವು ಬಾರಿ ಅತ್ಯಾಚಾರ ನಡೆಸಿದ್ದಾರೆ. 17 ವರ್ಷದ ಬಾಲಕಿ ಜೊತೆ 13 ವರ್ಷದ ಬಾಲಕಿಯೂ ಹೋಗಿದ್ದ ಸಂದರ್ಭದಲ್ಲಿ ಆಕೆಯ ಮೇಲೆಯೂ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ. ನಂತರ ಚಿಕ್ಕಮ್ಮನಿಗೆ ವಿಷಯ ತಿಳಿಸಿ, ದೂರು ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 6 ಜನರನ್ನು ಪೊಲೀಸರು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.