2018ರ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ..!
ಉತ್ತರ ಪ್ರದೇಶ: ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲಾ ನ್ಯಾಯಾಲಯವು ಅತ್ಯಾಚಾರ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. 2018ರಲ್ಲಿ 16 ವರ್ಷದ ದಲಿತ ಬಾಲಕಿಯ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಪ್ರಮುಖ ತೀರ್ಪು ಹೊರಹಾಕಿದೆ. ಆರೋಪಿ ರಾಹುಲ್ ಸಾಹ್ನಿ ಎಂಬಾತನ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿತ್ತು. ಇದರ ವಿಚಾರಣೆ ನಡೆಸಿದ ನ್ಯಾಯಾಧೀಶರು ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
ಪಾಕಿಸ್ತಾನಕ್ಕೆ ಭಾರತ ನೆರವು : 45 ಮಿಲಿಯನ್ ಡೋಸ್ ಕೋವಿಡ್ ಲಸಿಕೆ ಪೂರೈಕೆ..!
2018ರ ಜುಲೈ 1 ರಂದು ಚಿಟ್ ಬಡ್ಗಾವ್ ಪ್ರದೇಶದಲ್ಲಿ ಈ ಘಟನೆ ನಡೆದಿತ್ತು. ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದ. ಬಳಿಕ ಬಾಲಕಿಯ ತಂದೆ ಈತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪೊಲೀಸರು ಆರೋಪಿಯನ್ನ ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.