8 ವರ್ಷದ ಬಾಲಕಿಯೊಬ್ಬಳ ಮೇಲೆ ಸರ್ಕಾರಿ ಶಾಲೆಯ ಶೌಚಾಲಯದಲ್ಲಿ ಅದೇ ಶಾಲೆಯ ಕಾವಲುಗಾರನೊಬ್ಬ ಅತ್ಯಾಚಾರವೆಸಗಿರೋ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ..
ಭೋಪಾಲ್ ನ ಖೋಫಿಜಾ ಪ್ರದೇಶದಲ್ಲಿನ ಸರ್ಕಾರಿ ಶಾಲೆಯ ಶೌಚಾಲಯದಲ್ಲಿ 4 ನೇ ತರೆಗತಿ ವಿದ್ಯಾರರ್ಥಿನಿ ಮೇಲೆ ಲೈಂಗಿಕ ಕಿರುಕುಳ ನಡೆದಿದೆ..
ಪ್ರಕರಣದ ಆರೋಪಿ ಲಕ್ಷ್ಮೀನಾರಾಯಣ ಧನಕ್ ನನ್ನ ಪೊಲೀಸರು ಬಂಧಿಸಿದ್ದಾರೆ.. ಈತ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ.
ಈ ವಿದ್ಯಾರ್ಥಿನಿಯು 6 ದಿನಗಳ ಹಿಂದಷ್ಟೇ ಶಾಲೆಗೆ ಪ್ರವೇಶ ಪಡೆದಿದ್ದಳು. ಮಧ್ಯಾಹ್ನ ಊಟದ ಸಮಯದಲ್ಲಿ ಈಕೆ ಶೌಚಾಲಯಕ್ಕೆ ಹೋಗಿದ್ದ ಸಮಯದಲ್ಲಿ ಅಲ್ಲೇ ಇದ್ದ ಆರೋಪಿ ಲಕ್ಷ್ಮೀನಾರಾಯಣ ಆಕೆಯನ್ನು ಶೌಚಾಲಯದೊಳಗೆ ಕರೆದುಕೊಂಡು ಹೋಗಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ.
ಘಟನೆ ಬಳಿಕ ಲಕ್ಷ್ಮೀನಾರಾಯಣ ಪರಾರಿಯಾಗಿದ್ದಾನೆ. ಬಾಲಕಿ ಅಳುತ್ತಿರುವುದನ್ನು ಕಂಡು ಇತರ ವಿದ್ಯಾರ್ಥಿಗಳು ಶಿಕ್ಷಕರಿಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.