ಅಪ್ರಾಪ್ತ ಮಗಳ ಮೇಲೆ ಸ್ವಂತ ತಂದಯೇ ಅತ್ಯಾಚಾರ ಎಸಗಿರುವ ಘಟನೆ ವಿಟ್ಲದ ಪೆರುವಾಯಿಯಲ್ಲಿ ನಡೆದಿದೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಈತ ಮೂರು ವರ್ಷಗಳಿಂದ ತನ್ನ ಮೇಲೆ ಅತ್ಯಾಚಾರ ಮಾಡುತ್ತಿದ್ದ ಎಂದು ಸ್ವತಃ ಬಾಲಕಿಯೇ ಹೇಳಿಕೊಂಡಿದ್ದಾರೆ.
ಘಟನೆ ಬೆಳಕಿಗೆ ಬಂದಿದ್ದು ಹೇಗೆ?
ಸೋಮವಾರ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಅತ್ಯಾಚಾರವೆಸಗಿದ್ದು ಬಾಲಕಿ ಅದರಿಂದಾಗಿ ಅಸ್ವಸ್ಥಳಾಗಿದ್ದಳು. ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವೇಳೆ ಆಸ್ಪತ್ರೆಯಲ್ಲಿ ತನ್ನ ತಂದೆ ಅತ್ಯಾಚಾರ ಮಾಡುತ್ತಿದ್ದ ವಿಷಯವನ್ನು ಬಾಲಕಿ ತಿಳಿಸಿದ್ದು, ಆ ಬಳಿಕ ಪೊಲೀಸರಿಗೆ ದೂರು ನೀಡಲಾಗಿದೆ. ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.








