ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತೆ ಮೇಲೆ ಪುರುಷ ನರ್ಸ್ ನಿಂದ ಅತ್ಯಾಚಾರ – ಮಹಿಳೆ ಸಾವು
ಮಧ್ಯಪ್ರದೇಶ : ದೇಶದಲ್ಲಿ ಕೋವಿಡ್ 2ನೇ ಅಲೆಯ ಪರಿಸ್ಥಿತಿ ಅತ್ಯಂತ ವಿಷಮವಾಗಿದ್ದು, ಸುತ್ತಲೂ ಸಾವು ಸೋವಿನ ದೃಶ್ಯಗಳೇ ಕಂಡುಬರುತ್ತಿದೆ. ಈ ನಡುವೆ ಕೆಲ ಕೊರೊನಾ ವಾರಿರ್ಸ್ ಹಗಲಿರುಳು ಕಷ್ಟ ಪಟ್ಟು ಶ್ರಮಿಸುತ್ತಿದ್ದಾರೆ.. ಆದ್ರೆ ಇದಕ್ಕೆ ಅಪವಾದವೆಂಬಂತೆ ಅಲ್ಲೊಂದು ಇಲ್ಲೊಂದು ಅಪರಾಧ ಪ್ರಕರಣಗಳು ಬೆಳಕಿಗೆ ಬರುತ್ತಿವೆ.
ಹೌದು.. ಮಧ್ಯಪ್ರದೇಶದಲ್ಲಿ ಪುರುಷ ನರ್ಸ್ ಒಬ್ಬ ಕೋವಿಡ್ ಸೋಂಕಿತ (43) ಮಹಿಳೆಯ ಮೇಲೆ ಅತ್ಯಾಚಾರವೆಸಗಿರುವ ಹೇಯ ಕೃತ್ಯ ಬೆಳಕಿಗೆ ಬಂದಿದೆ. ಬಿ ಎಂ ಹೆಚ್ ಆರ್ ಸಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅತ್ಯಾಚಾರ ನಡೆದ ಕೆಲವೇ ಗಂಟೆಗಳಲ್ಲಿ ಸಂತ್ರಸ್ತೆ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ಈ ಘಟನೆಯು ಕಳೆದ ಏಪ್ರಿಲ್ 6 ರಂದೇ ನಡೆದಿದ್ದರೂ ಆಸ್ಪತ್ರೆ ಆಡಳಿತ ಮಂಡಳಿ ಮತ್ತು ಪೊಲೀಸರು ಈ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನ ಮಾಡಿದ್ದಾರೆ. ಒಂದು ತಿಂಗಳು ಕಳೆದ ನಂತರ ಸಾಮಾಜಿಕ ಕಾರ್ಯಕರ್ತರು ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ನಡೆಸಿದಾಗ ಪ್ರಕರಣವು ಬೆಳಕಿಗೆ ಬಂದಿದೆ.
ಅತ್ಯಾಚಾರ ನಡೆದ ಕೆಲವೇ ಗಂಟೆಗಳಲ್ಲಿ ಮಹಿಳೆಯ ಆರೋಗ್ಯ ಸ್ಥಿತಿ ಹದಗೆಡಲು ಆರಂಭಿಸಿದೆ. ಗಂಭೀರತೆಯನ್ನು ಅರಿತು ಕೂಡಲೇ ಆಕೆಯನ್ನು ವೆಂಟಿಲೇಟರ್ ಗೆ ಸ್ಥಳಾಂತರ ಮಾಡಲಾಯಿತು. ಆದರೆ ಅದೇ ದಿನ ಸಂಜೆ ಆಕೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ನಿಶತ್ಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು 40 ವರ್ಷದ ಸಂತೋಷ್ ಅಹಿರ್ವಾರ್ ಎಂದು ಗುರುತಿಸಲಾಗಿದೆ. ಸದ್ಯ ಪೊಲೀಸರು ಆರೋಪಿಗಯನ್ನ ಬಂಧಿಸಿದದ್ದಾರೆ. ಅಷ್ಟೇ ಅಲ್ಲದೇ ಬಂಧಿಸಿ ವಿಚಾರಣೆ ನಡೆಸಿದ ನಂತರ ಈತ ಈ ಹಿಂದೆ 24 ವರ್ಷದ ಸ್ಟಾಫ್ ನರ್ಸ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಬಗ್ಗೆಯೂ ತಿಳಿದುಬಂದಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.