ಅತ್ಯಚಾರ ಸಂತ್ರಸ್ತೆ : ಹೆಣ್ಣು ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ – ಮಗು ಸಾವು..!
ಉತ್ತರ ಪ್ರದೇಶ: ಅತ್ಯಾಚಾರಕ್ಕೊಳಗಾಗಿದ್ದ 13 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದು, ಮಗು ಮೃತಪಟ್ಟಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಆಸ್ಪತ್ರೆಯೊಂದರಲ್ಲಿ ಅತ್ಯಾಚಾರ ಸಂತ್ರಸ್ತೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಕೆಲವೇ ನಿಮಿಷಗಳಲ್ಲಿ ಮಗು ಮೃತಪಟ್ಟಿದೆ.
ಆರೋಪಿ ಅಮರನಾಥ್ ತಿವಾರಿ ಎಂಬಾತನನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಇದೀಗ ಮಗುವಿನ ಮರಣೋತ್ತರ ಪರೀಕ್ಷೆ ಮತ್ತು ಡಿಎನ್ಎ ಪರೀಕ್ಷೆಗಳ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಬ್ಯಾಂಕ್ ಅಧಿಕಾರಿಗಳ ಕಣ್ಮುಂದೆಯೇ ಆತ್ಮಹತ್ಯೆಗೆ ಶರಣಾದ ಮಹಿಳೆ.!
ಕಳೆದ ಆಗಸ್ಟ್ನಲ್ಲಿ ತನ್ನ ಮನೆಗೆ ಕರೆಸಿಕೊಂಡಿದ್ದ ಆರೋಪಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ. ಬಳಿಕ ಯಾರಿಗೂ ತಿಳಿಸದಂತೆ ಧಮ್ಕಿ ಹಾಕಿದ್ದೂ ಅಲ್ಲದೇ ಅನೇಕ ಬಾರಿ ಲೈಂಗಿಕ ದೌಜನ್ಯವೆಸಗಿದ್ದ ಎಂದು ಆರೋಪಿಸಲಾಗಿದೆ. ಆದ್ರೆ ಆಕೆ ಯಾರ ಬಳಿಯೂ ಈ ವಿಚಾರವನ್ನ ತಿಳಿಸಿರಲಿಲ್ಲ. ಬಳಿಕ ಆಕೆ ಗರ್ಭಿಣಿ ಎಂದು ಗೊತ್ತಾದಾಗ ಕುಟುಂಸ್ಥರು ವಿಷಯ ತಿಳಿದು ಪೊಲೀಸರಿಗೆ ದೂರು ನೀಡಿದ್ದರು. ನಂತರ ಆರೋಪಿಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದರು.