ಕನ್ನಡತಿ ರಶ್ಮಿಕಾ ಮಂದಣ್ಣಗೆ ‘ಪುಷ್ಪ’ ಸಿನಿಮಾ ಸಾಕಷ್ಟು ಹೆಸರು ತಂದು ಕೊಟ್ಟಿತು. ಹೀಗಾಗಿ ಈಗ ಅವರು ಪುಷ್ಪ 2 ಸಿನಿಮಾದಲ್ಲಿ ಕೂಡ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ತುಂಬಾ ಡಿಫರೆಂಟ್ ಆಗಿ ಕಾಣಿಸಿಕೊಂಡಿದ್ದು ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ.
ನಿರ್ದೇಶಕ ಸುಕುಮಾರ್ ಈ ಚಿತ್ರವನ್ನು ಮೊದಲ ಭಾಗಕ್ಕಿಂತಲೂ ಹೆಚ್ಚು ಒತ್ತು ನೀಡಿ ರಚಿಸುತ್ತಿದ್ದಾರೆ. ಅಲ್ಲು ಅರ್ಜುನ್ ಅಭಿಮಾನಿಗಳು ಕೂಡ ಈ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ‘ಪುಷ್ಪ 2’ ಸಿನಿಮಾದಲ್ಲಿ ಶ್ರೀವಲ್ಲಿ ಪಾತ್ರಕ್ಕೆ ಗ್ರೇ ಶೇಡ್ ಇರಲಿದೆ ಎಂದು ಹೇಳಲಾಗುತ್ತಿದೆ. ರಕ್ತ ಚಂದನದ ಕಳ್ಳ ಸಾಗಣೆಯಲ್ಲಿ ಡಾನ್ ಆಗಿರುವ ಪುಷ್ಪರಾಜ್ನ ಹೆಂಡತಿಯಾಗಿ ಅಬ್ಬರಿಸಲು ಸ್ಕ್ರೀನ್ ಸ್ಪೇಸ್ ಸಿಗಲಿದೆ. ಸಾಮಾನ್ಯವಾಗಿ ಮಾಮೂಲಿ ಕಮರ್ಷಿಯಲ್ ಸಿನಿಮಾಗಳಲ್ಲಿ ನಾಯಕಿಯರ ಪಾತ್ರಕ್ಕೆ ಹೆಚ್ಚು ಸ್ಕೋಪ್ ಕಡಿಮೆ. ಈ ಚಿತ್ರದಲ್ಲಿ ಅದೇನಿದೆಯೋ ನೋಡಬೇಕಿದೆ.
ಆಗಸ್ಟ್ 15ರಂದು ‘ಪುಷ್ಪ 2’ ಸಿನಿಮಾ ತೆರೆಗೆ ಅಪ್ಪಳಿಸಲಿದೆ. ಏಪ್ರಿಲ್ 5ರಂದು ರಶ್ಮಿಕಾ ಮಂದಣ್ಣ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಚಿತ್ರ ತಂಡ ಪೋಸ್ಟರ್ ಬಿಡುಗಡೆ ಮಾಡಿತ್ತು. ಬಿಗ್ ಬಜೆಟ್ನಲ್ಲಿ ‘ಪುಷ್ಪ 2’ ಸಿನಿಮಾ ಮೂಡಿಬರುತ್ತಿದೆ.. ‘ಮೈತ್ರಿ ಮೂವೀ ಮೇಕರ್ಸ್’ ಸಂಸ್ಥೆ ಬಂಡವಾಳ ಹೂಡಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ಬಿಡುಗಡೆ ಕಾಣಲಿದೆ.