ಕನ್ನಡತಿ ರಶ್ಮಿಕಾ ಮಂದಣ್ಣ ಈಗ ಬಾಲಿವುಡ್ ಸೇರಿದಂತೆ ಬಹುಭಾಷಾ ಅಂಗಳದಲ್ಲಿ ಮಿಂಚುತ್ತಿದ್ದಾರೆ. ಸಹಜವಾಗಿ ಅವರ ಅಭಿಮಾನಿ ಬಳಗ ಕೂಡ ದೊಡ್ಡದಾಗಿದೆ. ಈ ಮಧ್ಯೆ ಬ್ಲ್ಯಾಕ್ ಉಡುಪು ತೊಟ್ಟು ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ.
ಕಪ್ಪು ಬಣ್ಣದ ಬಟ್ಟೆ ತೊಟ್ಟು ನಟಿ ಮಿಂಚಿದ್ದಾರೆ. ಈ ಬಟ್ಟೆ ತೊಟ್ಟ ನಟಿ ಮಾದಕತೆಯ ದೃಷ್ಟಿ ಬೀರಿದ್ದು, ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಪುಷ್ಪ ಇನ್ ಫೈಯರ್ ಎಂದು ಹಲವರು ಹೇಳುತ್ತಿದ್ದಾರೆ. ನಟಿ ರಶ್ಮಿಕಾ ಪುಷ್ಪ ಚಿತ್ರದಿಂದ ಪ್ಯಾನ್ ಇಂಡಿಯಾ ಮಟ್ಟಕ್ಕೆ ಬೆಳೆದು ನಿಂತಿದ್ದಾರೆ. ಈಗ ಪುಷ್ಪ 2 ಚಿತ್ರದಲ್ಲಿ ಕೂಡ ನಟಿಸಿದ್ದಾರೆ. ಈ ಚಿತ್ರ ಭಾರೀ ನಿರೀಕ್ಷೆ ಮೂಡಿಸಿದೆ.
ಪುಷ್ಪ’ 2ರಲ್ಲಿ ಪುಷ್ಪರಾಜ್ ಈಗ ರಕ್ತಚಂದನದ ಕಳ್ಳಸಾಗಣೆಯಲ್ಲಿ ಕಿಂಗ್ ಪಿನ್ ಆಗಿದ್ದಾನೆ. ಮೊದಲ ಭಾಗದಲ್ಲಿ ರಕ್ತಚಂದನ ಜಪಾನ್‌ಗೆ ರಫ್ತಾಗಲಿದೆ ಎಂದು ತೋರಿಸಲಾಗಿತ್ತು. ಈಗ ಎರಡನೇ ಭಾಗ ವಿದೇಶದಲ್ಲಿ ನಡೆದಿದೆ ಎನ್ನಲಾಗಿದೆ. ಸಹಜವಾಗಿ ಚಿತ್ರ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಶ್ರೀವಲ್ಲಿ ರಶ್ಮಿಕಾರನ್ನು ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ಚಿತ್ರದಲ್ಲಿ ಮತ್ತೋರ್ವ ಕನ್ನಡಿಗ ಡಾಲಿ ಧನಂಜಯ್ ಕೂಡ ನಟಿಸಿದ್ದಾರೆ. ಇದು ಆಗಸ್ಟ್ 15ರಂದು ತೆರೆಗೆ ಬರಲಿದೆ.