ಫೋರ್ಬ್ಸ್ ನಲ್ಲಿ ನಂ.1 ಸ್ಥಾನ ಸಿಕ್ಕ ಖುಷಿಯಲ್ಲಿ ರಶ್ಮಿಕಾ
ಕನ್ನಡದ ಕಿರಿಕ್ ಪಾರ್ಟಿ ಸಿನಿಮಾ ಮೂಲಕವೇ ಹಿಟ್ ಆಗಿ , ಕನ್ನಡ ಸಿನಿಮಾರಂಗಕ್ಕೆ ಗುಡ್ ಬೈ ಹೇಳಿ ಬೇರೆ ಭಾಷೆಗಳಲ್ಲಿ ಮಿಂಚುತ್ತಿರುವ ರಶ್ಮಿಕಾ ಮಂದಣ್ಣ ಸದಾ ಟ್ರೋಲ್ , ಕಾಂಟ್ರವರ್ಸಿ ಮೂಲಕ , ಇಲ್ಲಾ ಸಾಲು ಸಾಲು ಸಿನಿಮಾಗಳ ವಿಚಾರಕ್ಕೆ ಸುದ್ದಿಯಲ್ಲಿರುತ್ತಾರೆ.. ಸೋಷಿಯಲ್ ಮೀಡಿಯಾದಲ್ಲಿ ಸಸಖತ್ ಆಕ್ಟೀವ್ ಆಗಿರುವ ರಶ್ಮಿಕಾ ನಟನೆಯ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಪುಷ್ಪ ರಿಲೀಸ್ ಆಗಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ತಿದೆ..
ರಷ್ಮಿಕಾ ಸಾಲು ಸಾಲು ಸಿನಿಮಾಗಳಲ್ಲಿ ಬ್ಯಸಿಯಿದ್ದಾರೆ.. ಸಿನಿಮಾಗಳ ಬಿಟ್ಟು ರಶ್ಮಿಕಾ ಸೋಷಿಯಲ್ ಮೀಡಿಯಾದಲ್ಲಿ ಸದಾ ಆಕ್ಟೀವ್ ಆಗಿರುತ್ತಾ ಅಭಿಮಾನಿಗಳ ಜೊತೆಗೆ ಕನೆಕ್ಟ್ ಆಗಿರುತ್ತಾರೆ.. ಈ ನಡುವೆ ಫೋರ್ಬ್ಸ್- ನಂ1 ಸ್ಥಾನ ಪಡೆದ ಖುಷಿಯಲ್ಲಿದ್ದಾರೆ ಚಷ್ಮಾ ಸುಂದರಿ..ರಶ್ಮಿಕಾ ಹೆಸರು ಫೋರ್ಬ್ಸ್ ಪಟ್ಟಿಯಲ್ಲಿ ದಾಖಲೆ ಮಾಡಿದೆ. ರಶ್ಮಿಕಾ ಈ ವಿಚಾರವನ್ನು ಹಂಚಿಕೊಂಡು ಸಂತಸ ವ್ಯಕ್ತ ಪಡಿಸಿದ್ದಾರೆ.
ಫೋರ್ಬ್ಸ್ ಪಟ್ಟಿಯಲ್ಲಿ ನಟಿ ರಶ್ಮಿಕಾ ಮಂದಣ್ಣ ಸ್ಥಾನ ಪಡೆದಿದ್ದಾರೆ. ಈ ವರ್ಷ ದಕ್ಷಿಣ ಭಾರತದ ಅತಿ ಹೆಚ್ಚು ಪ್ರಭಾವಿ ಸೆಲೆಬ್ರಿಟಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಅದರಲ್ಲಿ ರಶ್ಮಿಕಾ ನಂ.1 ಸ್ಥಾನ ಪಡೆದುಕೊಂಡಿದ್ದರು. ಈ ಬಗ್ಗೆ ನಟಿ ರಶ್ಮಿಕಾ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ. ‘ಜನರಿಂದ ಸಿಗುತ್ತಿರುವ ಪ್ರೀತಿಗೆ ಧನ್ಯವಾದಗಳು. ಇದಕ್ಕಾಗಿಯೇ ನಾನು ಕೆಲಸ ಮಾಡುತ್ತಿರುವುದು. ಈ ಪ್ರೀತಿ ಅಪರಿಮಿತವಾದದ್ದು. ವಿನಮ್ರವಾಗಿ ಇರಲು ಪ್ರಯತ್ನಿಸುತ್ತಿದ್ದೇನೆ’ ಎಂದು ಸಂದರ್ಶನದಲ್ಲಿ ರಶ್ಮಿಕಾ ಮಾತನಾಡಿದ್ದಾರೆ..