ಆಸ್ಪತ್ರೆಯಲ್ಲಿ ನವಜಾತ ಶಿಶುಗಳ ಕಾಲು ಕಚ್ಚಿ ತಿಂದ ಇಲಿಗಳು..!
ಮಧ್ಯಪ್ರದೇಶ : ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶುಗಳು ಕಾಲುಗಳನ್ನ ಇಲಿಗಳು ಕಚ್ಚಿ ತಿಂದಿರುವ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದೆ. ಇಲಿಗಳು ಮಕ್ಕಳ ಪಾದ ಕಚ್ಚಿ ತಿಂದಿದ್ದು, ಪ್ರಕರಣದ ವಿರುದ್ಧ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ಈ ಘಟನೆಗೆ ಆಸ್ಪತ್ರೆಯ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯ ಆಡಳಿತ ಮಂಡಳಿ ತನಿಖೆಗೆ ಆದೇಶಿಸಿದೆ.
ಈ ಸಂಬಂಧ ಆಸ್ಪತ್ರೆಯ ಅಧೀಕ್ಷಕ ಡಾ. ಪ್ರಮೇಂದ್ರ ಠಾಕೂರ್ ಪ್ರತಿಕ್ರಿಯಿಸಿ, ಸರ್ಕಾರದ ಅಧೀನದಲ್ಲಿರುವ ಮಹಾರಾಜ ಯಶವಂತರಾವ್ ಆಸ್ಪತ್ರೆಯಲ್ಲಿ ಇಲಿಗಳು ನವಜಾತ ಶಿಶುಗಳ ಕಾಲುಗಳನ್ನು ಕಚ್ಚಿ ತಿಂದ ಪ್ರಕರಣ ಬೆಳಕಿಗೆ ಬಂದಿದೆ ಎಂದು ತಿಳಿಸಿದ್ದಾರೆ. ತನಿಖೆಗಾಗಿ ಇಬ್ಬರು ವೈದ್ಯರು ಮತ್ತು ಆಡಳಿತಾಧಿಕಾರಿಯನ್ನು ಒಳಗೊಂಡ ಮೂವರು ಸದಸ್ಯರ ಸಮಿತಿಯನ್ನು ರಚಿಸಲಾಗಿದೆ ಎಂದು ಠಾಕೂರ್ ತಿಳಿಸಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








