ರವೀಶ್ ತಂತ್ರಿ ಕುಂಟಾರು ಬಿಜೆಪಿಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಕೆ.ಶ್ರೀಕಾಂತ್ ಅವರನ್ನು ಎರಡನೇ ಬಾರೀ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಆಯ್ಕೆ ಮಾಡಿದ ಹಿನ್ನೆಲೆಯಲ್ಲಿ ರವೀಶ್ ತಂತ್ರಿ ಅಸಮಾಧಾನಗೊಂಡಿದ್ದು, ಇದೀಗ ರಾಜ್ಯ ಸಮಿತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಈಗಾಗಲೇ ಪಕ್ಷದ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ಅವರಿಗೆ ಕಳುಹಿಸಿಕೊಟ್ಟಿದ್ದಾರೆ.
1994 ರಿಂದ 2016ರವರೆಗೆ ಸಂಘ ಪರಿವಾರದ ವಿವಿಧ ಸಂಘಟನೆಗಳಲ್ಲಿ ಕೆಲಸ ಮಾಡಿರುವ ತಂತ್ರಿಗಳು 2019ರಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದರು. ಈಗ ರಾಜ್ಯಾಧ್ಯಕ್ಷರಾಗಿರುವ ಕೆ.ಸುರೇಂದ್ರನ್ 2016ರಲ್ಲಿ ಮಂಜೇಶ್ವರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ 89 ಮತಗಳಿಂದ ಸೋಲು ಕಂಡಿದ್ದು, 2019ರಲ್ಲಿ ರವೀಶ ತಂತ್ರಿ ಆ ಕ್ಷೇತ್ರದಿಂದ ಟಿಕೆಟ್ ಪಡೆದುಕೊಂಡಿದ್ದರು.
ಪಕ್ಷದೊಳಗಿನ ಗುಂಪುಗಾರಿಕೆಯ ಕಾರಣದಿಂದ ಕೆ. ಸುರೇಂದ್ರನ್ ಅಂದು ಟಿಕೆಟ್ ಪಡೆಯಲು ವಿಫಲರಾಗಿದ್ದು, ಇದೀಗ ಅವರೇ ರಾಜ್ಯಾಧ್ಯಕರಾಗಿರುವುದರಿಂದ ಇನ್ನೊಂದು ಬಣ ತಮ್ಮ ಹಿಡಿತ ಸಾಧಿಸುತ್ತಿದೆ ಎಂಬ ಮಾತು ಕೇಳಿ ಬರುತ್ತಿದೆ.
ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?
ಸಂಜು ಸ್ಯಾಮ್ಸನ್.. ಹೌದು.. ದೇವರ ನಾಡಿನ ಹುಡುಗನ ಕ್ರಿಕೆಟ್ ಪಯಣದಲ್ಲಿವೆ ಹಲವು ಸ್ಪೂರ್ತಿದಾಯಕ ಕಥೆಗಳು..! ಅವಮಾನ, ಅಪಮಾನಗಳೇ ಇವರ ಯಶಸ್ಸಿನ ಮೆಟ್ಟಿಲು...! ಮೌನ ಕ್ರಾಂತಿಯಿಂದಲೇ ತನ್ನ ಹೆಸರಿಗೆ...








