1993ರ ಮುಂಬಯಿ ಸರಣಿ ಬಾಂಬ್ ಸ್ಪೋಟ್ ಮಾಸ್ಟರ್ ಮೈಂಡ್ ರವಿ ಪೂಜಾರಿಯನ್ನು ಪೊಲೀಸರು ಬಿಗಿಭದ್ರತೆಯೊಂದಿಗೆ ಬೆಂಗಳೂರಿಗೆ ಕರೆತಂದಿದ್ದಾರೆ. ನಗರದ ಮಡಿವಾಳ ಇಂಟರ್‍ಗೇಷನ್ ಕಚೇರಿಯಲ್ಲಿ ಇರಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಇಂದು ಕೋರ್ಟ್‍ಗೆ ಹಾಜರು ಪಡಿಸಲಿದ್ದಾರೆ.
ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಬೋಳೆತ್ತಿನ್ ಹಾಗೂ ಎಡಿಜಿಪಿ ಅಮರ್‍ಕುಮಾರ್ ಪಾಂಡೆ ನೇತೃತ್ವದಲ್ಲಿ ರವಿ ಪೂಜಾರಿ ವಿಚಾರಣೆ ನಡೆಯಲಿದೆ. ಉಡುಪಿ ಜಿಲ್ಲೆಯ ಮಲ್ಪೆ ಮೂಲದ ರವಿ ಪೂಜಾರಿ ಮೇಲೆ ಮುಂಬೈ ಬಾಂಬ್ ಸ್ಫೋಟ ಪ್ರಕರಣದ ಜೊತೆಗೆ ಮಂಗಳೂರಿನಲ್ಲಿ 39, ಬೆಂಗಳೂರಿನಲ್ಲಿ 38 ಕೇಸ್ ಹಾಗೂ ಬೆದರಿಕೆ ಪ್ರಕರಣಗಳು ದಾಖಲಾಗಿದೆ.
ಕಾಂಗ್ರೆಸ್ ನಾಯಕರಾದ ತನ್ವೀರ್ ಸೇಠ್, ಹೆಚ್.ಎಂ.ರೇವಣ್ಣ, ಕೇರಳ ವಿರೋಧ ಪಕ್ಷದ ನಾಯಕ ರಮೇಶ್ ಚೆನ್ನಾತ್ತಾಲಾ ಹಾಗೂ ಸಂಸದ ಡಿ.ಕೆ.ಸುರೇಶ್ ಬೆದರಿಕೆಯ ದೂರು ದಾಖಲಿಸಿದ್ದಾರೆ. ಸಾಕಷ್ಟು ವರ್ಷಗಳಿಂದ ತೆರೆಮರೆಯಲ್ಲಿದ್ದುಕೊಂಡು ತನ್ನ ಕುಖ್ಯಾತ ಚಟುವಟಿಕೆಗಳನ್ನ ಭಾರತದಲ್ಲಿ ಬೇರು ಬಿಟ್ಟಿದ್ದ ಈ ಗ್ಯಾಂಗ್‍ಸ್ಟರ್ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.