‘ಟೈಗರ್ ನಾಗೇಶ್ವರ ರಾವ್’ ಸಿನಿಮಾದ ಪ್ರೀ ಲುಕ್ ಪೋಸ್ಟರ್ ರಿಲೀಸ್
ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಆಧರಿಸಿ ಮೂಡಿಬಂದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದ ನಿರ್ಮಾಪಕ ಮತ್ತೊಂದು ನೈಜ ಘಟನೆಯಾಧಾರಿತ ಕಥೆಯನ್ನ ಸಿನಿಮಾ ಮಾಡಲು ಹೊರಟಿದ್ದಾರೆ.
ಈ ಚಿತ್ರಕ್ಕೆ ‘ಟೈಗರ್ ನಾಗೇಶ್ವರ ರಾವ್’ ಎಂದು ಶೀರ್ಷಿಕೆ ಇಡಲಾಗಿದೆ. ಟಾಲಿವುಡ್ ನ ಮಾಸ್ ಮಹಾ ರಾಜ ರವಿತೇಜಾ ಸಿನಿಮಾದ ಹೀರೋ ಆಗಿದ್ದಾರೆ.
ಬಹುಭಾಷೆಯಲ್ಲಿ ‘ಟೈಗರ್ ನಾಗೇಶ್ವರ ರಾವ್’ ಸಿನಿಮಾ ನಿರ್ಮಾಣ ಆಗುತ್ತಿದ್ದು, ವಂಶಿ ಅವರು ನಿರ್ದೇಶನ ಮಾಡಲಿದ್ದಾರೆ.
ಸ್ಟೂವರ್ಟ್ಪುರಂನಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿ ‘ಟೈಗರ್ ನಾಗೇಶ್ವರ ರಾವ್’ ನಿರ್ಮಾಣ ಆಗಲಿದೆ ಎಂದು ತಿಳಿದುಬಂದಿದೆ.
ಅಂದಹಾಗೆ ಇಂದು ಯುಗಾದಿ ಹಬ್ಬದ ಪ್ರಯುಕ್ತ ಸಿನಿಮಾದ ಪ್ರೀ ಲುಕ್ ಪೋಸ್ಟರ್ ಆನ್ನು ಚಿತ್ರತಂಡ ರಿಲೀಸ್ ಮಾಡಿದೆ. ಈ ಸಿನಿಮಾ ಕೂಡ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮೂಡಿ ಬರಲಿದೆ.
‘ಅಭಿಷೇಕ್ ಅಗರ್ವಾಲ್ ಆರ್ಟ್ಸ್’ ಬ್ಯಾನರ್ ಮೂಲಕ ‘ಟೈಗರ್ ನಾಗೇಶ್ವರ ರಾವ್’ ಚಿತ್ರ ಸಿದ್ಧವಾಗಲಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ.
ಇನ್ನು ಮಾಸ್ ಮಹಾರಾಜ ರವಿ ತೇಜ ಪಾಲಿಗೆ ಇದು ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಆಗಲಿದೆ. ಆ ಕಾರಣದಿಂದಲೂ ‘ಟೈಗರ್ ನಾಗೇಶ್ವರ ರಾವ್’ ಚಿತ್ರ ನಿರೀಕ್ಷೆ ಸೃಷ್ಟಿ ಮಾಡಿದೆ.
ಕುಖ್ಯಾತ ಹಾಗೂ ಧೈರ್ಯಶಾಲಿ ಕಳ್ಳನ ಕಥಾನಕವನ್ನು ಒಳಗೊಂಡಿರುವ ಈ ಚಿತ್ರದಲ್ಲಿ ರವಿತೇಜ ಅವರು ಸಂಪೂರ್ಣ ಭಿನ್ನವಾಗಿ ಕಾಣಿಸಿಕೊಳ್ಳಲಿದ್ದಾರೆ. ಅವರಿಗೆ ನಾಯಕಿಯರಾಗಿ ನೂಪುರ್ ಸನೋನ್, ಗಾಯತ್ರಿ ಭಾರದ್ವಜ್ ಅವರು ನಟಿಸಲಿದ್ದಾರೆ. ಮತ್ತೋರ್ವ ನಟಿ ಕೂಡ ಈ ಸಿನಿಮಾದಲ್ಲಿ ಇರಲಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ.
ರೆಟ್ರೋ ಶೈಲಿಯಲ್ಲಿ ‘ಟೈಗರ್ ನಾಗೇಶ್ವರ ರಾವ್’ ಸಿನಿಮಾ ಮೂಡಿಬರಲಿದೆ. ಆರ್. ಮ್ಯಾಥಿ ಐಎಸ್ಸಿ ಛಾಯಾಗ್ರಹಣ, ಜಿವಿ ಪ್ರಕಾಶ್ ಕುಮಾರ್ ಸಂಗೀತ ನಿರ್ದೇಶನ, ಶ್ರೀಕಾಂತ್ ವಿಸ್ಸಾ ಸಂಭಾಷಣೆಯ ಜವಾಬ್ದಾರಿ ಹೊತ್ತಿದ್ದಾರೆ.
Ravi Teja announces his first pan Indian film titled Tiger Nageswara Rao