ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ನಿನ್ನೆ ಜಿಲ್ಲಾ ಉತ್ಸವಕ್ಕೆ ಚಾಲನೆ ನೀಡಲಾಗಿದ್ದು, ಈ ಉತ್ಸವದಲ್ಲಿ ಸಚಿವ ಸಿ.ಟಿ ರವಿ ಕುಣಿದು ಕುಪ್ಪಳಿಸಿದ್ದಾರೆ. ನಿನ್ನೆ ಸಂಜೆ ಸಂಸದೆ ಶೋಭಾ ಕರಂದ್ಲಾಜೆ ದೀಪ ಬೆಳಗುವ ಮೂಲಕ ಚಿಕ್ಕಮಗಳೂರು ಉತ್ಸವಕ್ಕೆ ಚಾಲನೆ ನೀಡಿದ್ದರು. ಸಚಿವ ಸಿ.ಟಿ.ರವಿ ಡೋಲು ಬಾರಿಸುವ ಮೂಲಕ ಕಾರ್ಯಕ್ರಮ ಆರಂಭಿಸಿದ್ದರು. ರಾತ್ರಿ 10.30ರ ವೇಳೆಗೆ ಉತ್ಸವ ಮುಗಿಯುತ್ತಿದ್ದಂತೆ ಸಚಿವರು, ಮಕ್ಕಳು ಹಾಗೂ ಸ್ಥಳೀಯರ ಜೊತೆ ಸೇರಿ ಸಖತ್ ಸ್ಟೆಪ್ಸ್ ಹಾಕಿದ್ದಾರೆ.
ಸಚಿವರ ಕುಣಿತಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ರಂಗಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮುರುಡಪ್ಪ ಸೇರಿದಂತೆ ಸ್ಥಳೀಯರು ಸಾಥ್ ನೀಡಿದ್ದಾರೆ. ಚಿಕ್ಕಮಗಳೂರು ನಗರದ ಸುಭಾಷ್ ಚಂದ್ರಬೋಸ್ ಆಟದ ಮೈದಾನದಲ್ಲಿ ಉತ್ಸವಕ್ಕೆ ಚಾಲನೆ ನೀಡಲಾಗಿದೆ. ಮೂರು ದಿನಗಳ ಕಾಲ ಉತ್ಸವ ನಡೆಯಲಿದೆ.








