Jadeja | 35 ವರ್ಷಗಳ ದಾಖಲೆ ಉಡೀಸ್… ಜಡ್ಡು ಮೊದಲ ಆಟಗಾರ
ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಅಮೋಘ ಶತಕ ಸಿಡಿಸಿದ್ದಾರೆ.
ಈ ಪಂದ್ಯದಲ್ಲಿ ಜಡೇಜಾ 175 ರನ್ ಗಳಿಸಿ ಅಜೇಯರಾಗಿ ಉಳಿದು ಟೆಸ್ಟ್ ಕ್ರಿಕೆಟ್ ನಲ್ಲಿ ಅಪರೂಪದ ದಾಖಲೆ ನಿರ್ಮಿಸಿದ್ದಾರೆ.
ಲಂಕಾ ವಿರುದ್ಧದ ಪಂದ್ಯದಲ್ಲಿ ರವೀಂದ್ರ ಜಡೇಜಾ ಏಳನೇ ಸ್ಥಾನದಲ್ಲಿ ಬ್ಯಾಟಿಂಗ್ ಬಂದು 175 ರನ್ ಗಳು ಗಳಿಸುವ ಮೂಲಕ ಅತಿ ಹೆಚ್ಚು ರನ್ ಗಳಿಸಿದ ಮೊದಲ ಭಾರತೀಯ ಎನಿಸಿಕೊಂಡಿದ್ದಾರೆ.
ಇದಕ್ಕೂ ಮುನ್ನ ಟೀಂ ಇಂಡಿಯಾದ ಮಾಜಿ ನಾಯಕ ಕಪಿಲ್ ದೇವ್ 1986ರಲ್ಲಿ ಶ್ರೀಲಂಕಾ ವಿರುದ್ಧ 7ನೇ ಬ್ಯಾಟಿಂಗ್ ಮಾಡಿ 163 ರನ್ ಗಳಿಸಿದ್ದರು.
ಇದೀಗ ರವೀಂದ್ರ ಜಡೇಜಾ, ಕಪಿಲ್ ದೇವ್ ಅವರ 175 ರನ್‌ಗಳ ದಾಖಲೆಯನ್ನು ಮುರಿದಿದ್ದಾರೆ. ಅದೇ ರೀತಿಯಲ್ಲಿ ವಿಕೆಟ್ ಕೀಪರ್ ರಿಷಬ್ ಪಂತ್ 159 ರನ್ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ.
ಟೀಂ ಇಂಡಿಯಾದ ಮಾಜಿ ನಾಯಕ 7ನೇ ಸ್ಥಾನದಲ್ಲಿ ಬ್ಯಾಟಿಂಗ್‌ಗೆ ಆಗಮಿಸಿ ದಕ್ಷಿಣ ಆಫ್ರಿಕಾ ವಿರುದ್ಧ 144 ರನ್ ಗಳಿಸಿದ್ದರು.
ಇನ್ನು ಗಾಯದ ಸಮಸ್ಯೆಯಿಂದಾಗಿ ಟೀಂ ಇಂಡಿಯಾದಿಂದ ದೂರ ಇದ್ದ ರಾಕ್ ಸ್ಟಾರ್ ಜಡೇಜಾ, ಇದೀಗ ಮೊದಲಿನಂತಲೇ ಬ್ಯಾಟಿಂಗ್, ಬೌಲಿಂಗ್ ನಲ್ಲಿ ಮಿಂಚುತ್ತಿರುವುದು ಅಭಿಮಾನಿಗಳಿಗೆ ಖುಷಿ ತಂದಿದೆ.