ಗಾಂಧೀನಗರ: ಭಾರತೀಯ ಕ್ರಿಕೆಟ್ ತಂಡದ ಆಲ್ ರೌಂಡರ್ ರವೀಂದ್ರ ಜಡೇಜಾ (Ravindra Jadeja) ಅವರು ಬಿಜೆಪಿ ಸೇರಿದ್ದಾರೆ ಎನ್ನಲಾಗಿದೆ.
ಪತಿ ಬಿಜೆಪಿಗೆ ಸೇರ್ಪಡೆಗೊಂಡ ಫೋಟೋವನ್ನು ಪತ್ನಿ, ಗುಜರಾತ್ (Gujarat) ಶಾಸಕಿ ರಿವಾಬಾ ಜಡೇಜಾ (Rivaba Jadeja) ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ರಾಷ್ಟ್ರಾದ್ಯಂತ ಬಿಜೆಪಿ (BJP) ಈಗ ಸದಸ್ಯತ್ವ ಅಭಿಯಾನ ಹಮ್ಮಿಕೊಂಡಿದೆ. ಇದರ ಭಾಗವಾಗಿ ಜಡೇಜಾಬಿಜೆಪಿ ಸೇರಿದ್ದಾರೆ. ಆದರೆ, ಈ ಕುರಿತು ಜಡೇಜಾ ಮಾತ್ರ ಅಧಿಕೃತವಾಗಿ ಹೇಳಿಕೊಂಡಿಲ್ಲ.
ರಿವಾಬಾ ಜಡೇಜಾ 2019ರಲ್ಲಿ ಬಿಜೆಪಿ ಪಕ್ಷ ಸೇರಿದ್ದರು. 2022 ರ ವಿಧಾನಸಭಾ ಚುನಾವಣೆಯಲ್ಲಿ ಜಾಮ್‌ನಗರ್ ಉತ್ತರ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು.