ಭಾರತ ಹಾಗೂ ಇಂಗ್ಲೆಂಡ್ ಮಧ್ಯೆ ಟೆಸ್ಟ್ ಸರಣಿ ಆರಂಭವಾಗಿದ್ದು, ಬೌಲರ್ ರವೀಂದ್ರ ಜಡೇಜಾ ಅಪರೂಪದ ದಾಖಲೆಯ ಮೇಲೆ ಕಣ್ಣಿಟ್ಟಿದ್ದಾರೆ.
ರವೀಂದ್ರ ಜಡೇಜಾ ಕೇವಲ 2 ವಿಕೆಟ್ ಪಡೆದರೆ, 6 ಭಾರತೀಯ ಆಟಗಾರರು ನಿರ್ಮಿಸಿರುವ ವಿಶೇಷ ಸಾಧನೆಯ ಪಟ್ಟಿಗೆ ಸೇರಿಕೊಳ್ಳಲಿದ್ದಾರೆ. ಮೊದಲ ಟೆಸ್ಟ್ನಲ್ಲಿ ಜಡೇಜಾ ಎರಡು ವಿಕೆಟ್ ಪಡೆದರೆ ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ 550 ವಿಕೆಟ್ ಪಡೆದ ಸಾಧನೆ ಮಾಡಲಿದ್ದಾರೆ.
ಈ ಮೂಲಕ ಈ ಸಾಧನೆ ಮಾಡಿದ ಭಾರತದ 7ನೇ ಬೌಲರ್ ಎನಿಸಿಕೊಳ್ಳಲಿದ್ದಾರೆ. ಇಲ್ಲಿಯವರೆಗೆ ಅನಿಲ್ ಕುಂಬ್ಳೆ, ಕಪಿಲ್ ದೇವ್, ಜಹೀರ್ ಖಾನ್, ಹರ್ಭಜನ್ ಸಿಂಗ್, ಆರ್ ಅಶ್ವಿನ್ ಮತ್ತು ಜಾವಗಲ್ ಶ್ರೀನಾಥ್ ಮಾತ್ರ ಈ ಸಾಧನೆ ಮಾಡಿದ್ದಾರೆ. ಇವರ ನಂತರದ ಸ್ಥಾನ ರವೀಂದ್ರ ಪಾಲಿಗೆ ಬರಲಿದೆ.
ಜಡೇಜಾ ಭಾರತ ಪರ ಇಲ್ಲಿಯವರೆಗೆ 68 ಟೆಸ್ಟ್, 197 ಏಕದಿನ ಮತ್ತು 66 ಟಿ20 ಪಂದ್ಯಗಳನ್ನು ಆಡಿದ್ದಾರೆ. ಟೆಸ್ಟ್ನಲ್ಲಿ 275, ಏಕದಿನದಲ್ಲಿ 220 ಮತ್ತು ಟಿ20ಯಲ್ಲಿ 53 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಇಂಗ್ಲೆಂಡ್ ವಿರುದ್ಧ 16 ಟೆಸ್ಟ್ ಪಂದ್ಯಗಳನ್ನಾಡಿರುವ ಜಡೇಜಾ 51 ವಿಕೆಟ್ ಕಬಳಿಸಿದ್ದಾರೆ.