ಕೇಂದ್ರ ಐಟಿ ಸಚಿವ ರವಿಶಂಕರ್ ಪ್ರಸಾದ್ ಅವರ ಟ್ವಿಟರ್ ಖಾತೆ ತಾತ್ಕಾಲಿಕ ಸ್ಥಗಿತವಾಗಿದ್ದ ಕಾರಣ..?
ನವದೆಹಲಿ: ಕೇಂದ್ರ ಐಟಿ ಸಚಿವ ರವಿಶಂಕರ್ ಪ್ರಸಾದ್ ಅವರ ಟ್ವಿಟರ್ ಖಾತೆ ತಾತ್ಕಾಲಿಕ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು.. ಟ್ವಿಟರ್ ಸಂಸ್ಥೆಯು ರವಿಶಂಕರ್ ಪ್ರಸಾದ್ ಅವರ ಟ್ವಿಟರ್ ಖಾತೆಯನ್ನು ಒಂದು ಗಂಟೆ ಕಾಲ ಸ್ಥಗಿತಗೊಳಿಸಿತ್ತು. ಜೂನ್ 25 ರಂದು ಈ ಘಟನೆ ನಡೆದಿತ್ತು…
ಅಮೆರಿಕದ ಬೌದ್ಧಿಕ ಹಕ್ಕುಗಳ ಕಾಯ್ದೆಯನ್ನು ಉಲ್ಲಂಘಿಸಿದ ಆರೋಪದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಟ್ವಿಟರ್ ಪ್ರತಿಕ್ರಿಯೆ ನೀಡಿದೆ. ‘ಇದೊಂದು ನಿರಂಕುಶ ಕ್ರಮವಾಗಿದ್ದು, ಭಾರತದ ಐಟಿ ಕಾನೂನುಗಳ ಸ್ಪಷ್ಟ ಉಲ್ಲಂಘನೆ’ ಎಂದು ಕಿಡಿಕಾರಿದ್ದಾರೆ. ಇದರ ಬೆನ್ನಲ್ಲೇ, ಕಾಂಗ್ರೆಸ್ ನಾಯಕ ಶಶಿ ತರೂರ್ ಅವರ ಖಾತೆಯನ್ನೂ ಟ್ವಿಟರ್ ತಾತ್ಕಾಲಿಕವಾಗಿ ಸಸ್ಪೆಂಡ್ ಮಾಡಿದೆ.
ಈ ಕುರಿತು ಮಾಹಿತಿ ನೀಡಿದ ಶಶಿ ತರೂರ್, ‘ರಸ್ ಪುಟಿನ್ ಹಾಡಿಗೆ ನೃತ್ಯ ಮಾಡಿರುವ ವಿಡಿಯೋ’ ಪೋಸ್ಟ್ ಮಾಡಿದ್ದಕ್ಕೆ ಟ್ವಿಟರ್ ಈ ಕ್ರಮ ಕೈಗೊಂಡಿದೆ. ಆದರೆ, ಐಟಿಗೆ ಸಂಬಂಧಿಸಿದ ಸಂಸದೀಯ ಸ್ಥಾಯಿ ಸಮಿತಿ ಅಧ್ಯಕ್ಷನಾಗಿರುವ ಕಾರಣ ನಾನು, ನನ್ನ ಮತ್ತು ಸಚಿವ ಪ್ರಸಾದ್ ಅವರ ಖಾತೆ ಸ್ಥಗಿತ ಕುರಿತು ಟ್ವಿಟರ್ ನಿಂದ ವಿವರಣೆ ಕೇಳಲಿದ್ದೇನೆ ಎಂದಿದ್ದಾರೆ.
ಕೊರೊನಾ ರಿಪೋರ್ಟ್ : ಕಳೆದ 24 ಗಂಟೇಲಿ 48,698 ಮಂದಿಗೆ ಸೋಂಕು
ಜುಲೈನಿಂದ ಅನ್ವಯವಾಗಲಿದೆಯೇ ಹೊಸ ವೇತನ ಸಂಹಿತೆ ?
‘ದೇಶದಲ್ಲಿ ಕೊರೋನಾ ಎರಡನೆಯ ಅಲೆ ಮುಗಿದಿಲ್ಲ’ – ‘ಡೆಲ್ಟಾ’ ಆತಂಕ
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.