RBI ನಿಂದ ಶೀಘ್ರವೇ ಡಿಜಿಟಲ್ ಕರೆನ್ಸಿ ಚಲಾವಣೆಗೆ ತರುವ ಕಾರ್ಯ – ಡೆಪ್ಯುಟಿ ಗವರ್ನರ್
ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ತನ್ನದೇ ಆದ ಡಿಜಿಟಲ್ ಕರೆನ್ಸಿಯನ್ನು ಸಗಟು ಮತ್ತು ಚಿಲ್ಲರೆ ವ್ಯಾಪಾರ ವಲಯಗಳಿಗೆ ಶೀಘ್ರವಾಗಿ, ಹಂತ ಹಂತವಾಗಿ ಚಲಾವಣೆ ತರಲು ಕೆಲಸ ನಡೆಸಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕಿನ ಡೆಪ್ಯುಟಿ ಗವರ್ನರ್ ಟಿ. ರವಿಶಂಕರ್ ತಿಳಿಸಿದ್ದಾರೆ.
ವಿಶ್ವದ ಹಲವು ಕೇಂದ್ರೀಯ ಬ್ಯಾಂಕ್ ಗಳು ತಮ್ಮದೇ ಆದ ಡಿಜಿಟಲ್ ಕರೆನ್ಸಿಯನ್ನು ರೂಪಿಸುತ್ತಿವೆ ಎಂದೂ ಇದೇ ವೇಳೆ ಹೇಳಿದ್ದಾರೆ. ಕೆಲವು ವರ್ಚುವಲ್ ಕರೆನ್ಸಿಗಳ ಮೌಲ್ಯದಲ್ಲಿ ಕಂಡುಬರುತ್ತಿರುವ ಭಾರಿ ಅಸ್ಥಿರತೆಯಿಂದ ಗ್ರಾಹಕರನ್ನು ರಕ್ಷಿಸಲು ಕೇಂದ್ರೀಯ ಬ್ಯಾಂಕ್ಗಳು ತಮ್ಮದೇ ಆದ ಡಿಜಿಟಲ್ ಕರೆನ್ಸಿ ಹೊಂದುವುದು ಅಗತ್ಯ ಎಂದು ರವಿಶಂಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಹಣಕಾಸು ಸಚಿವಾಲಯ ರಚಿಸಿರುವ ಅಂತರ ಸಚಿವಾಲಯದ ಸಮಿತಿಯೊಂದು, ಕೇಂದ್ರೀಯ ಬ್ಯಾಂಕ್ ವತಿಯಿಂದ ಡಿಜಿಟಲ್ ಕರೆನ್ಸಿಯನ್ನು ಚಲಾವಣೆಗೆ ತರಬೇಕು ಎಂದು ಶಿಫಾರಸು ಮಾಡಿದೆ. ಈ ಬಗೆಯ ಕರೆನ್ಸಿಯನ್ನು ಚಲಾವಣೆಗೆ ಬಿಡುವುದರ ಸಾಧಕ, ಬಾಧಕವನ್ನು ಆರ್ಬಿಐ ಪರಿಶೀಲಿಸುತ್ತಿದೆ ಎಂದು ಹೇಳಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.