ತುರ್ತು ಆರೋಗ್ಯ ಸೇವೆಗಳಿಗೆ 50,000 ಕೋಟಿ ರೂ. ಮೀಸಲಿಟ್ಟ RBI

1 min read

ತುರ್ತು ಆರೋಗ್ಯ ಸೇವೆಗಳಿಗೆ 50,000 ಕೋಟಿ ರೂ. ಮೀಸಲಿಟ್ಟ RBI

ದೇಶಾದ್ಯಂತ ಕೊರೊನಾ 2ನೇ ಅಲೆ ಅತಿ ಭಯನಾಕರೂಪ ಪಡೆದಿದ್ದು, ಸಾವು ನೋವುಗಳ ಸಂಖ್ಯೆ , ದಿನೇದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗ್ತಲೇ ಇದೆ. ಈ ನಡುವೆ ಅನೇಕರು ಜನರ ಸಂಕಷ್ಟದ ಸಮಯದಲ್ಲಿ ಸಹಾಯಾಸ್ತ ಚಾಚಿದ್ದಾರೆ. ಇದೀಗ RBI ನ ಗವರ್ನರ್ ಶಕ್ತಿಕಾಂತ್ ದಾಸ್ ಅವರು ತುರ್ತು ಆರೋಗ್ಯ ಸೇವೆಗಳಿಗಾಗಿ RBI 50,000 ಕೋಟಿ ರೂಪಾಯಿಗಳನ್ನ ಮೀಸಲಿಡಲಾಗುವುದು ಎಂದು  ಘೋಷಣೆ ಮಾಡಿದ್ದಾರೆ.

ಅಲ್ಲದೇ ಕೊರೊನಾ 2ನೇ ಅಲೆ ಆರ್ಥಿಕತೆಯ ಮೇಲೆ ಪರಿಣಾಮ ಬೀರಿದೆ. ಎರಡನೇ ಅಲೆ ವಿರುದ್ಧ ಹೊರಾಡಲು ದೊಡ್ಡ ಹೆಜ್ಜೆ ಅಗತ್ಯವಿದೆ ಎಂದು ಹೇಳಿದ್ದಾರೆ. ಬ್ಯಾಂಕ್ ಗಳು ಲಸಿಕೆ ತಯಾರಕರು, ಲಸಿಕೆ ಸಾಗಣೆ, ರಫ್ತುದಾರರಿಗೆ ಸುಲಭ ಕಂತುಗಳಲ್ಲಿ ಸಾಲವನ್ನು ನೀಡುತ್ತವೆ. ಆಸ್ಪತ್ರೆಗಳು, ಆರೋಗ್ಯ ಸೇವಾ ಪೂರೈಕೆದಾರರು ಇದರ ಲಾಭ ಪಡೆಯಲಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೇ ಚಿಲ್ಲರೆ ಮತ್ತು ಸಣ್ಣ ಉದ್ಯಮಿಗಳಿಗೆ RBI ಗವರ್ನರ್ ದೊಡ್ಡ ಪರಿಹಾರ ನೀಡಿದ್ದಾರೆ. ಇದರೊಂದಿಗೆ ಇನ್ನೂ ಕೆಲವು ಪರಿಹಾರಗಳನ್ನು ಸಹ ಘೋಷಿಸಲಾಗಿದೆ. ಆದ್ಯತೆಯ ಕ್ಷೇತ್ರಕ್ಕೆ ಸಾಲ ಮತ್ತು ಪ್ರೋತ್ಸಾಹ ಧನ ಶೀಘ್ರದಲ್ಲೇ ನೀಡಲಾಗುವುದು ಎಂದು ಹೇಳಿದ್ದಾರೆ.

ದೇಶದಲ್ಲಿ ಕೊರೊನಾಗೆ ಲೆಕ್ಕವಿಲ್ಲದಷ್ಟು ಮಂದಿ ಬಲಿಯಾಗ್ತಿದ್ದಾರೆ. ಅದೆಷ್ಟೋ ಜನರು ತಮ್ಮವರನ್ನ ಕಳೆದುಕೊಂಡು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ.   ಸಿನಿ ತಾರಯರು ಸಹ ತಮ್ಮರನ್ನ ಕಳೆದುಕೊಂಡು ನೋವನ್ನ ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಳ್ತಿದ್ದಾರೆ.  ಸೋಂಕಿತರು ಬೆಡ್ ಸಿಗದೇ ಆಕ್ಸಿಜನ್ ಕೊರತೆಯಿಂದ ನರಳಿ ನರಳಿ ಪ್ರಾಣ ಬಿಡುತ್ತಿದ್ದಾರೆ. ಇಂತಹ ಕೆಟ್ಟ ಪರಿಸ್ಥಿತಿಗೆ ಬಂದು ದೇಶ ತಲುಪಿದೆ. ಅಂತಹದ್ರಲ್ಲಿ ತೀರಾ ಮನಕಲಲಕುಂತಹ ಘಟನೆಗಳು ಆಗಾಗ ಬೆಳಕಿಗೆ ಬರುತ್ತಲೇ ಇದೆ..

ಸರ್ಕಾರದ ಜೊತೆ ಕೊರೊನಾ ವಿರುದ್ಧ ಹೋರಾಟದಲ್ಲಿ ಜನರು ಕೈಜೋಡಿಸಬೇಕಾಗಿದೆ. ಜನರು ಸುಖಾಸುಮ್ಮನೆ ಅನಗತ್ಯವಾಗಿ ಹೊರಗಡೆ ಓಡಾಡದೇ , ಗುಂಪಿನಲ್ಲಿ ಬೆರೆಯದೇ , ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿ ತಮ್ಮನ್ನ ತಾವು ರಕ್ಷಣೆ ಮಾಡಿಕೊಳ್ಳಬೇಕಿದೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd