RCB ಬೌಲರ್ ಹೆಸರಲ್ಲಿ ಅತ್ಯಂತ ಕೆಟ್ಟ ದಾಖಲೆ
1 min read
rcb-josh-hazelwood-claims-unwanted-record saaksha tv
RCB ಬೌಲರ್ ಹೆಸರಲ್ಲಿ ಅತ್ಯಂತ ಕೆಟ್ಟ ದಾಖಲೆ
ಆಸ್ಟ್ರೇಲಿಯಾದ ವೇಗಿ ಜೋಶ್ ಹ್ಯಾಜಲ್ವುಡ್ ಐಪಿಎಲ್ ಇತಿಹಾಸದಲ್ಲೇ ಅತ್ಯಂತ ಕೆಟ್ಟ ದಾಖಲೆ ನಮೂದಿಸಿದ್ದಾರೆ.
ಶುಕ್ರವಾರ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಹ್ಯಾಜಲ್ವುಡ್ ನಾಲ್ಕು ಓವರ್ಗಳಲ್ಲಿ 64 ರನ್ ನೀಡಿ ಒಂದೇ ಒಂದು ವಿಕೆಟ್ ಪಡೆಯುವಲ್ಲಿ ವಿಫಲರಾದರು.
ಆ ಮೂಲಕ ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ಕೆಟ್ಟ ದಾಖಲೆ ದಾಖಲಿಸಿದ್ದಾರೆ.
16 ರನ್ಗಳ ಎಕಾನಮಿಯಲ್ಲಿ ಹ್ಯಾಜಲ್ ವುಡ್ ಐಪಿಎಲ್ನಲ್ಲಿ ಅತಿ ಹೆಚ್ಚು ರನ್ ನೀಡಿದ ವಿದೇಶಿ ಬೌಲರ್ ಎಂಬ ಬೇಡವಾದ ದಾಖಲೆ ಬರೆದಿದ್ದಾರೆ. ಈ ಪಟ್ಟಿಯಲ್ಲಿ ಹೇಜಲ್ವುಡ್ ಅಗ್ರಸ್ಥಾನದಲ್ಲಿದ್ದಾರೆ.
ಇದಕ್ಕೂ ಮುನ್ನಾ ಈ ಋತುವಿನ ಆರಂಭದಲ್ಲಿ ಮುಂಬೈ ಇಂಡಿಯನ್ಸ್ ಬೌಲರ್ ಮಾರ್ಕೊ ಜಾನ್ಸೆನ್ ಗುಜರಾತ್ ಟೈಟಾನ್ಸ್ ವಿರುದ್ಧ 4 ಓವರ್ಗಳಲ್ಲಿ 63 ರನ್ ನೀಡಿದ್ರು.

2021ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸಿಎಸ್ಕೆ ಪರ 4 ಓವರ್ಗಳಲ್ಲಿ 61 ರನ್ ನೀಡಿ ಲುಂಗಿ ಎನ್ಗಿಡಿ ಒಂದೇ ಒಂದು ವಿಕೆಟ್ ಪಡೆಯುವಲ್ಲಿ ವಿಫಲರಾಗಿದ್ದರು.
RCB ಪರವಾಗಿ ಹ್ಯಾಜಲ್ವುಡ್ ಐಪಿಎಲ್ ಇತಿಹಾಸದಲ್ಲಿ ಅತ್ಯಂತ ಕೆಟ್ಟ ಬೌಲಿಂಗ್ ಪ್ರದರ್ಶನ ನೀಡಿದ್ದಾರೆ.
ಇದಕ್ಕೂ ಮುನ್ನ ಶೇನ್ ವ್ಯಾಟ್ಸನ್ 2016ರಲ್ಲಿ ಎಸ್ಆರ್ಎಚ್ ವಿರುದ್ಧದ ಪಂದ್ಯದಲ್ಲಿ 61 ರನ್ ನೀಡಿದ್ದರು.
ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸೋತ ಆರ್ಸಿಬಿ ಪ್ಲೇ ಆಫ್ ಅವಕಾಶ ಮತ್ತಷ್ಟು ಕಠಿಣವಾಗಿದೆ.
ಗುಜರಾತ್ ಟೈಟಾನ್ಸ್ ವಿರುದ್ಧದ ಅಂತಿಮ ಪಂದ್ಯದಲ್ಲಿ ಆರ್ಸಿಬಿ ಗೆಲ್ಲಲೇಬೇಕು. ಒಂದು ರೀತಿಯಲ್ಲಿ RCBಗೆ ಮಾಡು ಇಲ್ಲವೇ ಮಡಿ ಪಂದ್ಯ ಎಂಬಂತಾಗಿದೆ. rcb-josh-hazelwood-claims-unwanted-record