ಹೊಸ ಜರ್ಸಿಯಲ್ಲಿ ಕಣಕ್ಕಿಳಿಯಲಿದೆ ಆರ್ ಸಿಬಿ

1 min read
RCB saaksha tv

ಹೊಸ ಜರ್ಸಿಯಲ್ಲಿ ಕಣಕ್ಕಿಳಿಯಲಿದೆ ಆರ್ ಸಿಬಿ

ದುಬೈ : ಇನ್ನೇನು ಕೆಲವೇ ದಿನಗಳಲ್ಲಿ ಬಹುನಿರೀಕ್ಷಿತ ಐಪಿಎಲ್ ಕ್ರಿಕೆಟ್ ಹಬ್ಬ ಶುರುವಾಗಲಿದೆ.

ಐಪಿಎಲ್ ದ್ವಿತೀಯಾರ್ಧದ ಪಂದ್ಯಗಳಿಗಾಗಿ ಈಗಾಗಲೇ ಎಲ್ಲಾ ತಂಡಗಳು ಯುಎಇಗೆ ತೆರಳಿಸಿ ತಾಲೀಮು ಆರಂಭಿಸಿವೆ.

ಐಪಿಎಲ್ ನ ದ್ವಿತೀಯಾರ್ಧದ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಲಿವೆ.

ಇತ್ತ ಈ ಬಾರಿ ಕಪ್ ಗೆಲ್ಲುವ ವಿಶ್ವಾಸ ಮೂಡಿಸಿರುವ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೆಪ್ಟೆಂಬರ್ 20ರಂದು ತನ್ನ ಮೊದಲ ಪಂದ್ಯವಾಡಲಿದೆ.

RCB New Jersey  saaksha tv

ಈ ಮ್ಯಾಚ್ ಅಬುಧಾಬಿಯಲ್ಲಿ ನಡೆಯಲಿದ್ದು, ಆರ್ ಸಿಬಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೆಣಸಾಡಲಿದೆ.

ಈ ಪಂದ್ಯದಲ್ಲಿ ಆರ್ ಸಿಬಿ ಹೊಸ ಜರ್ಸಿಯೊಂದಿಗೆ ಕಣಕ್ಕಿಳಿಯಲಿದೆ.

ಕೋವಿಡ್ ವೈರಸ್ ವಿರುದ್ಧ ಹೋರಾಡುತ್ತಿರುವ ಮುಂಚೂಣಿ ಯೋಧರಿಗೆ ಗೌರವ ಮತ್ತು ಬೆಂಬಲ ನೀಡುವ ಉದ್ದೇಶದಿಂದ ಆರ್ ಸಿಬಿ ತಂಡವು ತಿಳಿ ನೀಲಿ ಬಣ್ಣದ ಜೆರ್ಸಿಯೊಂದಿಗೆ ಮೊದಲ ಪಂದ್ಯವಾಡಲಿದೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd