RCB | ಎಲಿಮಿನೇಟರ್ ಪಂದ್ಯಕ್ಕಾಗಿ ಬೆಂಗಳೂರು ಸಕತ್ ತಯಾರಿ
ಚೊಚ್ಚಲ ಐಪಿಎಲ್ ಪ್ರಶಸ್ತಿ ಮೇಲೆ ಕಣ್ಣಿಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು ಈಡನ್ ಗಾರ್ಡನ್ಸ್ ನಲ್ಲಿ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಲಖನೌ ಸೂಪರ್ ಜಯಂಟ್ಸ್ ವಿರುದ್ಧ ಸೆಣಸಲು ಸಜ್ಜಾಗುತ್ತಿದೆ.
ಈಗಾಗಲೇ ಕೊಲ್ಕತ್ತಾಗೆ ಆಗಮಿಸಿರುವ ಬೆಂಗಳೂರು ತಂಡ ಭರ್ಜರಿ ತಾಲೀಮು ನಡೆಸುತ್ತಿದೆ.
ಕಳೆದ ನಾಲ್ಕು ಪಂದ್ಯಗಳಲ್ಲಿ ನಮ್ಮ ತಂಡ ಉತ್ತಮ ಕ್ರಿಕೆಟ್ ಆಡಿದೆ. ಅದರಲ್ಲೂ ಕಳೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧದ ಗೆಲುವು ತಂಡದಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ.
ನಾವು ಪಾಸಿಟಿವ್ ಮೂಡ್ ನಲ್ಲಿ ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯುತ್ತೇವೆ ಎಂದು ಆರ್ ಸಿಬಿಯ ಡೈರೆಕ್ಟರ್ ಮೈಕ್ ಹಸ್ಸನ್ ಹೇಳಿದ್ದಾರೆ.
ಅಂದಹಾಗೆ ಆರ್ ಸಿಬಿ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡದ ಆಟಗಾರರು ಪ್ರಾಕ್ಟಿಸ್ ಆಡುತ್ತಿರುವ ವಿಡಿಯೋವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದೆ.RCB Preparation for Eliminator Match