ಆರ್ ಸಿಬಿ ತಂಡಕ್ಕೆ ಬಂದ್ರು ಹೊಸ ಆಟಗಾರರು
ನವದೆಹಲಿ : 14ನೇ ಆವೃತ್ತಿಯ ಎರಡನೇ ಹಂತದ ಐಪಿಎಲ್ ಗೆ ನಮ್ಮ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಹೊಸದಾಗಿ ಮೂವರು ಆಟಗಾರರು ಸೇರ್ಪಡೆಗೊಂಡಿದ್ದಾರೆ.
ಈ ಬಾರಿಯ ಐಪಿಎಲ್ ನ ಇನ್ನುಳಿದ ಪಂದ್ಯಗಳು ಇದೇ ಸೆಪ್ಟೆಂಬರ್ 19 ರಿಂದ ಯುಎಇನಲ್ಲಿ ಆರಂಭವಾಗಲಿವೆ. ಈ ಟೂರ್ನಿಗೆ ಆರ್ ಸಿಬಿಯ ಕೆಲವು ಆಟಗಾರರು ಅಲಭ್ಯವಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಬದಲಿಗೆ ಆರ್ ಸಿಬಿ ಹೊಸ ಆಟಗಾರರನ್ನು ಆಯ್ಕೆ ಮಾಡಿಕೊಂಡಿದೆ.
ಇದರಲ್ಲಿ ಆಸ್ಟ್ರೇಲಿಯಾದ ಆಡಂ ಜಂಪಾ ಬದಲಿಗೆ ಶ್ರೀಲಂಕಾದ ಸ್ಪಿನ್ ಆಲ್ ರೌಂಡರ್ ವನಿಂದು ಹಸರಂಗ ಅವರನ್ನು ಆಯ್ಕೆ ಮಾಡಿದ್ದರೇ ಕಿವೀಸ್ ನ ಫಿನ್ ಅಲೆನ್ ಬದಲಿಗೆ ಸಿಂಗಾಪುರ್ ತಂಡದ ಟಿಮ್ ಡೇವಿಡ್ ಮತ್ತು ಆಲ್ ರೌಂಡರ್ ಡೇನಿಯಲ್ ಸ್ಯಾಮ್ಸ್ ಬದಲಿಗೆ ಶ್ರೀಲಂಕಾದ ದುಷ್ಮಂತ ಚಮೀರರನ್ನು ಬದಲಿ ಆಟಗಾರರನ್ನಾಗಿ ನೇಮಿಸಿಕೊಂಡಿದೆ ಆರ್ ಸಿಬಿ.
ಈ ಬಗ್ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.