ಐಪಿಎಲ್ ನ 17ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈಗೆ ಶರಣಾಗಿದೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡ ಲೀಗ್ನಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಇತ್ತ ಆರ್ಸಿಬಿ ಸೋಲಿನ ಸರಣಿ ಮುಂದುವರೆದಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ತಂಡ ಅನುಜ್ ರಾವತ್ ಹಾಗೂ ದಿನೇಶ್ ಕಾರ್ತಿಕ್ ಅಮೋಘ ಜೊತೆಯಾಟದ ನೆರವಿನಿಂದ ನಿಗದಿ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 173 ರನ್ ಗಳಿಸಿತ್ತು. ಈ ಗುರಿ ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 18.4 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು.
ಚೆನ್ನೈನ ಸಂಘಟಿತ ಬ್ಯಾಟಿಂಗ್ ಹಾಗೂ ಮುಸ್ತಫಿಜುರ್ ರೆಹಮಾನ್ ಮಾರಕ ಬೌಲಿಂಗ್ ದಾಳಿಗೆ ಬೆಂಗಳೂರು ಸೋಲು ಒಪ್ಪುವಂತಾಯಿತು. ಈ ಮೂಲಕ ಋತುರಾಜ್ ಗಾಯಕ್ವಾಡ್ ನಾಯಕತ್ವದಲ್ಲಿ ಗೆಲುವಿನ ಶುಭಾರಂಭ ಕಂಡಿದೆ.