RCB vs MI | ಮುಂಬೈ vs ಫಾಫ್ ಡುಪ್ಲಸಿಸ್ ಗೆಲ್ಲೋದು ಯಾರು..?
ಇಂಡಿಯನ್ ಪ್ರಿಮಿಯರ್ ಲೀಗ್ ನ 18ನೇ ಪಂದ್ಯದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಎಂ.ಸಿ.ಎ ಅಂಗಣದಲ್ಲಿ ಈ ಪಂದ್ಯ ನಡೆಯಲಿದ್ದು, ಮುಂಬೈಗೆ ಗೆಲುವು ಅನಿವಾರ್ಯವಾಗಿದೆ.
ಸ್ಟ್ರೆಂಥ್ ಅಂಡ್ ವೀಕ್ನೆಸ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಆಡಿರುವ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಗೆಲುವು ದಾಖಲಿಸಿದೆ. ಒಂದರಲ್ಲಿ ಸೋತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಇಂದು ಒಂದು ಬದಲಾವಣೆ ಖಂಡಿತವಾಗಿಯೂ ನಡೆಯುತ್ತದೆ. ಮ್ಯಾಕ್ಸ್ ವೆಲ್ ತಂಡಕ್ಕೆ ವಾಪಸ್ ಆಗಿರುವುದರಿಂದ ರುದರ್ ಪೋರ್ಡ್ ಅವರ ಸ್ಥಾನದಲ್ಲಿ ಮ್ಯಾಕ್ಸಿ ಕಣಕ್ಕಿಳಿಯಲಿದ್ದಾರೆ. ಬೌಲಿಂಗ್ ನಲ್ಲಿ ಸಿರಾಜ್, ಹರ್ಷಲ್, ವನಿಂದು ಟ್ರಂಪ್ ಕಾರ್ಡ್ ಆಗಿದ್ದಾರೆ.
ಮುಂಬೈ ಇಂಡಿಯನ್ಸ್ ತಂಡ ಈ ಬಾರಿಯ ಐಪಿಎಲ್ ನಲ್ಲಿ ಅತ್ಯಂತ ಶೋಚನಿಯ ಸ್ಥಿತಿಯಲ್ಲಿದೆ. ಆಡಿರುವ ಮೂರು ಪಂದ್ಯಗಳನ್ನು ಸೋತಿರುವ ರೋಹಿತ್ ಬಳಗ ಗೆಲುವಿಗಾಗಿ ಹಂಬಲಿಸುತ್ತಿದೆ. ಮುಂಬೈ ಇಂಡಿಯನ್ಸ್ ತಂಡದ ಬ್ಯಾಟಿಂಗ್ ಬಲಿಷ್ಠವಾಗಿ ಕಂಡು ಬರುತ್ತಿದೆ. ಆದ್ರೆ ಬೌಲಿಂಗ್ ವಿಭಾಗದ ಚಿಂತೆ ಮುಂಬೈ ಇಂಡಿಯನ್ಸ್ ತಂಡವನ್ನು ಕಾಡುತ್ತಿದೆ. ಜಸ್ಪ್ರಿತ್ ಬೂಮ್ರಾಗೆ ಸಾಥ್ ಕೊಡುವ ಬೌಲರ್ ಗಳ ಕೊರತೆ ಕಾಣುತ್ತಿದೆ.
RCB vs MI match prediction









