RCB vs SRH Match | ಹೆಡ್ ಟು ಹೆಡ್ ದಾಖಲೆ ಹೇಗಿದೆ ಗೊತ್ತಾ..?
ಇಂಡಿಯನ್ ಪ್ರಿಮಿಯರ್ ಲೀನ್ ನ 36 ನೇ ಪಂದ್ಯದಲ್ಲಿ ಆರ್ ಸಿಬಿ ತಂಡ ಸನ್ ರೈಸರ್ಸ ಹೈದರಾಬಾದ್ ತಂಡದ ಸವಾಲು ಎದುರಿಸಲಿದೆ. ಬ್ರೆಬೋರ್ನ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಉಭಯ ತಂಡಗಳು ಭಾರಿ ಕಸರತ್ತು ನಡೆಸಿವೆ. ಬೆಂಗಳೂರು ತಂಡ ಸದ್ಯ ಅಂಕಪಟ್ಟಿಯಲ್ಲಿ 10 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಸನ್ ರೈಸರ್ಸ್ ಹೈದರಾಬಾದ್ ತಂಡ ಎಂಟು ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದೆ. ಈ ಪಂದ್ಯದಲ್ಲಿ ಗೆದ್ದರೇ ಹೈದರಾಬಾದ್ ತಂಡ ಅಂಕಪಟ್ಟಿಯಲ್ಲಿ ಮೇಲೇರುವ ಸಾಧ್ಯತೆಗಳಿವೆ. ರಾಯಲ್ ಚಾಲೆಂಜರ್ಸ್ ಗೆದ್ದರೇ ಪ್ಲೇ ಆಪ್ಸ್ ಇನ್ನಷ್ಟು ಹತ್ತಿರವಾಗಲಿದೆ.
ಉಭಯ ತಂಡಗಳ ಹೆಡ್ ಟು ಹೆಡ್ ರೆಕಾರ್ಡ್ ನೋಡೋದಾದ್ರೆ
ಇಂಡಿಯಲ್ ಪ್ರಿಮಿಯರ್ ಲೀಗ್ ಇತಿಹಾಸದಲ್ಲಿ ಈ ವರೆಗೂ ಆರ್ ಸಿಬಿ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು 20 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಸನ್ ರೈಸರ್ಸ್ ಹೈದರಾಬಾದ್ ತಂಡ ಮೇಲು ಗೈ ಸಾಧಿಸಿದೆ. ಹೈದರಾಬಾದ್ ತಂಡ 11 ಪಂದ್ಯಗಳಲ್ಲಿ ಗೆಲುವು ಕಂಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಒಂದು ಪಂದ್ಯದಲ್ಲಿ ಫಲಿತಾಂಶ ಬಂದಿಲ್ಲ.
ಭಾರತದಲ್ಲಿ ಆಡಿರುವ 16 ಪಂದ್ಯಗಳಲ್ಲಿ ಆರ್ ಸಿಬಿ ತಂಡ 7 ಪಂದ್ಯಗಳಲ್ಲಿ ಗೆದ್ದರೇ ಸನ್ ರೈಸರ್ಸ್ ಹೈದರಾಬಾದ್ ತಂಡ 8 ಪಂದ್ಯಗಳಲ್ಲಿ ಗೆದ್ದಿದೆ. ಭಾರತ ಬಿಟ್ಟ ಬೇರೆ ದೇಶಗಳಲ್ಲಿ ಆಡಿದ ನಾಲ್ಕು ಪಂದ್ಯದಲ್ಲಿ ಆರ್ ಸಿಬಿ ತಂಡ 1 ಪಂದ್ಯಗೆದ್ದರೇ ಸನ್ ರೈಸರ್ಸ್ ತಂಡ ಮೂರು ಪಂದ್ಯಗಳಲ್ಲಿ ಗೆಲುವಿನ ಕೇಕೆ ಹಾಕಿದೆ. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಆರ್ ಸಿಬಿ ತಂಡದ ಆವರೇಜ್ ಸ್ಕೋರ್ 158 ರನ್ ಇದ್ದರೇ ಎಸ್ ಆರ್ ಹೆಚ್ ತಂಡದ ಆವರೇಜ್ 167 ರನ್ ಆಗಿದೆ.
ಸನ್ ರೈಸರ್ಸ್ ವಿರುದ್ದ ಆರ್ ಸಿಬಿ ಪರ ವಿರಾಟ್ ಕೊಹ್ಲಿ 569 ರನ್ ಗಳಿಸಿದ್ದರೇ ಆರ್ ಸಿಬಿ ವಿರುದ್ಧ ಎಸ್ ಆರ್ ಹೆಚ್ ಪರ ವಾರ್ನರ್ 820 ರನ್ ಗಳಿಸಿದ್ದಾರೆ. ಆರ್ ಸಿಬಿ ವಿರುದ್ಧ ಭುವನೇಶ್ವರ್ ಕುಮಾರ್ 15 ವಿಕೆಟ್ ಪಡೆದ್ರೆ, ಆರ್ ಸಿಬಿ ಪರ ಚಹಲ್ 16 ವಿಕೆಟ್ ಪಡೆದಿದ್ದಾರೆ.
ಇನ್ನು ಕಳೆದ ಐದು ಪಂದ್ಯಗಳಲ್ಲಿ ಸನ್ ರೈಸರ್ಸ್ ತಂಡ ಮೂರು ಪಂದ್ಯಗಳಲ್ಲಿ ಗೆದ್ದರೇ ಆರ್ ಸಿಬಿ ತಂಡ ಎರಡು ಪಂದ್ಯಗಳಲ್ಲಿ ಗೆದ್ದಿದೆ. ಕಳೆದ ಆವೃತ್ತಿಯಲ್ಲಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯದಲ್ಲಿ ಗೆಲುವು ಸಾಧಿಸಿವೆ.