RCB vs SRH Match | ಟಾಸ್ ಗೆದ್ದ ಆರ್ ಸಿಬಿ ಬ್ಯಾಟಿಂಗ್ ಆಯ್ಕೆ
ಗೆಲ್ಲಲೇಬೇಕಾದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸನ್ ರೈಸರ್ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಆರ್ ಸಿಬಿಯಲ್ಲಿ ಯಾವುದೇ ಬದಲಾವಣೆಗಳು ನಡೆದಿಲ್ಲ. ಸನ್ ರೈಸರ್ಸ್ ತಂಡದಲ್ಲಿ ಎರಡು ಬದಲಾವಣೆಗಳಾಗಿವೆ. ಆಬ್ಬಾಟ್ ಮತ್ತು ಶ್ರೇಯಸ್ ಗೋಪಾಲ್ ಬದಲಿಗೆ ಫಾರೂಕ್ ಮತ್ತು ಸುಚಿತ್ ಗೆ ಅವಕಾಶ ನೀಡಿಲಾಗಿದೆ.
ಇಂಡಿಯನ್ ಪ್ರಿಮಿಯರ್ ಲೀಗ್ ನ 54 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸುತ್ತಿದೆ. ಮುಂಬೈನ ವಾಂಖೆಡೆ ಮೈದಾನದಲ್ಲಿ ಈ ಪಂದ್ಯ ಆರಂಭವಾಗಿದ್ದು, ಗೆಲುವಿವಾಗಿ ಉಭಯ ತಂಡಗಳು ಜಿದ್ದಾಜಿದ್ದಿನ ಹೋರಾಟ ನಡೆಸಲಿದೆ.
ತಂಡಗಳು
ಆರ್ ಸಿಬಿ :
ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ಸಿ), ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ಪ), ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್‌ವುಡ್
ಎಸ್ ಆರ್ ಹೆಚ್ :
ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್ (c), ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್ (w), ಶಶಾಂಕ್ ಸಿಂಗ್, ಜಗದೀಶ ಸುಚಿತ್, ಕಾರ್ತಿಕ್ ತ್ಯಾಗಿ, ಭುವನೇಶ್ವರ್ ಕುಮಾರ್, ಫಜಲ್ಹಕ್ ಫಾರೂಕಿ, ಉಮ್ರಾನ್ ಮಲಿಕ್ rcb-vs-srh-match-Royal Challengers Bangalore opt to bat