RCB vs SRH | ಆರ್ ಸಿಬಿ ತಂಡದಲ್ಲಿ ಬದಲಾವಣೆ ಆಗುತ್ತಾ..?
ಇಂಡಿಯನ್ ಪ್ರಿಮಿಯರ್ ಲೀಗ್ ನ 54 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಮುಂಬೈನ ವಾಂಖೆಡೆ ಮೈದಾನದಲ್ಲಿ ಈ ಪಂದ್ಯ ನಡೆಯಲಿದ್ದು, ಗೆಲುವಿವಾಗಿ ಉಭಯ ತಂಡಗಳು ಜಿದ್ದಾಜಿದ್ದಿನ ಹೋರಾಟ ನಡೆಸಲಿದೆ.
ಸನ್ ರೈಸರ್ಸ್ ಹೈದರಾಬಾದ್ ತಂಡ ಈ ಆವೃತ್ತಿಯಲ್ಲಿ ಎರಡನೇ ಬಾರಿಗೆ ಮುಖಾಮುಖಿಯಾಗುತ್ತಿವೆ. ಕಳೆದ ಬಾರಿ ಸೆಣಸಾಡಿದ್ದಾಗ ಆರ್ ಸಿಬಿ ತಂಡ ಅತ್ಯಂತ ಹೀನಾಯವಾಗಿ ಸೋಲು ಕಂಡಿತ್ತು. ಎಸ್ ಆರ್ ಹೆಚ್ 9 ವಿಕೆಟ್ ಗಳಿಂದ ಜಯ ಸಾಧಿಸಿತ್ತು. ಹೀಗಾಗಿ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ ಬೆಂಗಳೂರು ತಂಡ.
ಫಾಫ್ ಡುಪ್ಲಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಸೀಸನ್ ನಲ್ಲಿ 11 ಪಂದ್ಯಗಳನ್ನಾಡಿದೆ. ಇದರಲ್ಲಿ 6 ಪಂದ್ಯಗಳನ್ನು ಗೆದ್ದು ಐದು ಪಂದ್ಯಗಳಲ್ಲಿ ಸೋಲು ಕಂಡಿದೆ. ಹೀಗಾಗಿ ಅಂಕಪಟ್ಟಿಯಲ್ಲಿ 12 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.
ಕಳೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆಡಿತ್ತು. ಈ ಪಂದ್ಯದಲ್ಲಿ ಸಾಂಘಿಕ ಪ್ರದರ್ಶನ ನೀಡಿದ ಆರ್ ಸಿಬಿ 13 ರನ್ ಗಳಿಂದ ಜಯ ಸಾಧಿಸಿತ್ತು. ಆರ್ ಸಿಬಿ ಪರ ಮಹಿಪಾಲ್ ಲೋಮ್ರೋರ್ 42 ರನ್ ಗಳಿಸಿದ್ರು. ಹೀಗಾಗಿ ಇದೇ ಪ್ರದರ್ಶನವನ್ನು ಮುಂದುವರೆಸುವ ವಿಶ್ವಾಸದಲ್ಲಿದೆ ಆರ್ ಸಿಬಿ.
ತಂಡಗಳ ಬಲಾಬಲದ ವಿಚಾರಕ್ಕೆ ಬಂದರೇ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ವಿಚಾರಕ್ಕೆ ಬಂದರೇ ತಂಡದ ಗೆಲುವು ನಿಂತಿರೋದೇ ಸಾಂಘಿಕ ಆಟದ ಮೇಲೆ. ಬ್ಯಾಟಿಂಗ್, ಬೌಲಿಂಗ್ ವಿಭಾಗ ಕ್ಲಿಕ್ ಆದ್ರೆ ತಂಡಕ್ಕೆ ಗೆಲುವು ಖಚಿತ. ಕಳೆದ ಪಂದ್ಯದಲ್ಲಿ ಆರಂಭಿಕರಾಗಿ ವಿರಾಟ್ ಕೊಹ್ಲಿ, ಫಾಫ್ ಡುಪ್ಲಸಿಸ್ ಉತ್ತಮ ಜೊತೆಯಾಟ ನೀಡಿದ್ರು, ಆದ್ರೆ ವಿರಾಟ್ ಬ್ಯಾಟಿಂಗ್ ಸ್ಟ್ರೈಕ್ ರೇಟ್ ಚೆನ್ನಾಗಿಲ್ಲ. ಮ್ಯಾಕ್ಸ್ ವೆಲ್ ಬ್ಯಾಟಿಂಗ್ ನಲ್ಲಿ ಸದ್ದು ಮಾಡುತ್ತಿಲ್ಲ. ಆದ್ರೆ ಯುವ ಬ್ಯಾಟರ್ ಗಳಾದ ರಜತ್ ಪಟಿದಾರ್, ಮಹಿಪಾಲ್ ಲೋಮ್ರೋರ್ ಅದ್ಭುತವಾಗಿ ಆಡುತ್ತಿದ್ದಾರೆ. ಇದು ತಂಡದ ಆತ್ಮ ವಿಶ್ವಾಸ ಹೆಚ್ಚಿಸಿದೆ. ಕೆಲ ಕ್ರಮಾಂಕದಲ್ಲಿ ದಿನೇಶ್ ಕಾರ್ತಿಕ್, ಶಹಬ್ಬಾಸ್ ಮೇಲೆ ತಂಡಕ್ಕೆ ನಂಬಿಕೆ ಇದೆ.
ಇನ್ನು ಬೌಲಿಂಗ್ ವಿಭಾಗಕ್ಕೆ ಬಂದರೇ ಮಹ್ಮದ್ ಸಿರಾಜ್ ದುಬಾರಿಯಾಗುತ್ತಿರೋದು ತಂಡಕ್ಕೆ ತಲೆನೋವಾಗಿದೆ. ಇವರನ್ನು ಹೊರತು ಪಡಿಸಿದ್ರೆ ಜೋಸ್ ಹೆಜಲ್ ವುಡ್, ಹರ್ಷಲ್ ಪಟೇಲ್ ಮ್ಯಾಚ್ ವಿನ್ನಿಂಗ್ಸ್ ಸ್ಪೆಲ್ ಮಾಡುತ್ತಿದ್ದಾರೆ. ಹಸರಂಗ ವಿಕೆಟ್ ಬೇಟೆಯಾಗುತ್ತಿದ್ದಾರೆ. ಐದನೇ ಬೌಲರ್ ಆಗಿ ಮ್ಯಾಕ್ಸಿ, ಶಹಬ್ಬಾಸ್ ಕಮಾಲ್ ಮಾಡುತ್ತಿದ್ದಾರೆ.
ಪ್ಲೇಯಿಂಗ್ ಇಲೆವೆನ್
ವಿರಾಟ್ ಕೊಹ್ಲಿ
ಫಾಫ್ ಡುಪ್ಲಸಿಸ್
ಗ್ಲೇನ್ ಮ್ಯಾಕ್ಸ್ ವೆಲ್
ರಜತ್ ಪಟಿದಾರ್
ಮಹಿಪಾಲ್ ಲೋಮ್ರೋರ್
ದಿನೇಶ್ ಕಾರ್ತಿಕ್
ಶಹಬ್ಬಾಸ್ ಅಹ್ಮದ್
ವನಿಂದು ಹಸರಂಗ
ಹರ್ಷಲ್ ಪಟೇಲ್
ಜೋಸ್ ಹೆಜಲ್ ವುಡ್
ಮೊಹ್ಮದ್ ಸಿರಾಜ್
rcb-vs-srh-Royal Challengers Bangalore playing 11